ಗಿಣಿಗೇರಿ ಬೇಂದ್ರೆ ಶಾಲೆ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

 ತಾಲೂಕಿನ ಗಿಣಿಗೇರ ಬೇಂದ್ರೆ ಪಬ್ಲಿಕ್ ಶಾಲೆಯ ವಿದ್ಯಾರ್ಥಿಯು ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕೊಪ್ಪಳ ತಾಲೂಕಿನ ಹೊಸಕನಕಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾನೆ.
ಅಭಿಷೇಕ ವೀರೇಶ ಅಂಗಡಿ ಎಂಬ ವಿದ್ಯಾರ್ಥಿಯು ಶ್ರೀರಾಘವೇಂದ್ರ ವೇಷ ಧರಿಸಿ ಎಲ್ಲರ ಗಮನ ಸೆಳೆದು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 

Leave a Reply