ಈಶ್ವರಪ್ಪ, ಶ್ರೀರಾಮುಲುಗೆ ನೋಟಿಸ್

ಬಳ್ಳಾರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಹಾಗೂ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಬಿ. ಶ್ರೀರಾಮುಲು ಹಾಗೂ ಚುನಾವಣಾ ವೆಚ್ಚ ನೀಡದ ಮೂವರು ಪಕ್ಷೇತರ ಅಭ್ಯರ್ಥಿಗಳಿಗೆ ಸ್ಪಷ್ಟನೆ ಕೇಳಿ ಚುನಾವಣಾಧಿಕಾರಿ ಶಶಿಕಾಂತ್ ಸೆಂಥಿಲ್ ನೋಟಿಸ್ ಜಾರಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಬಳ್ಳಾರಿ ತಾಲೂಕಿನ ಸಂಗನಕಲ್ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಚುನಾವಣಾ ಪ್ರಚಾರ ಮಾಡಿದ್ದಾರೆ ಎಂದು ಶ್ರೀ ರಾಮುಲು ಪರ ವಕೀಲ ದೂರು ನೀಡಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಚುನಾವಣಾಧಿಕಾರಿ ಗಳು ಈಶ್ವರಪ್ಪಗೆ ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ಶ್ರೀರಾಮುಲು ಜೋಳದರಾಶಿ ಗ್ರಾಮದಲ್ಲಿ ಮತದಾರರಿಗೆ ಊಟ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ನೀಡಿದ ದೂರಿನ ಮೇರೆಗೆ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಸ್ಪಷ್ಟನೆ ಕೋರಿ ನೋಟಿಸ್ ನೀಡಿದ್ದಾರೆ. ನ. ೧೮ರಂದು ಚುನಾವಣಾ ವೆಚ್ಚದ ಲೆಕ್ಕವನ್ನು ಅಭ್ಯರ್ಥಿಗಳನ್ನು ನೀಡಬೇಕಿತ್ತು. ಆದರೆ ಈವರೆಗೆ ನೀಡದ ಪಕ್ಷೇತರ ಅಭ್ಯರ್ಥಿ ಗಂಗಾಧರ, ಅಂಜಿನಪ್ಪ, ಕೆ. ಚನ್ನಪ್ಪ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ತಿಳಿಸಿದ್ದಾರೆ.
ತಹಸೀಲ್ದಾರ್ ವಿರುದ್ಧ ದೂರು: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮತ್ತು ಬಳ್ಳಾರಿ ತಹಸೀಲ್ದಾರ್ ಶಶಿಧರ ಬಗಲಿ ಅವರು ಪಕ್ಷೇತರ ಅಭ್ಯರ್ಥಿ ಶ್ರೀರಾಮುಲು ಪರವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಘಟಕ ಮುಖ್ಯ ಚುನಾವಣಾಧಿ ಕಾರಿಗಳಿಗೆ ದೂರು ನೀಡಿದೆ.
-ಬಳ್ಳಾರಿ ಉಪ ಚುನಾವಣೆ: ಈಶ್ವರಪ್ಪ, ಶ್ರೀರಾಮುಲುಗೆ ನೋಟಿಸ್
ಬಳ್ಳಾರಿ: ಬಳ್ಳಾರಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹಾಗೂ ಪಕ್ಷೇತರ ಅಭ್ಯರ್ಥಿ ಬಿ.ಶ್ರೀರಾಮುಲು ಅವರಿಗೆ ಚುನಾವಣಾಧಿಕಾರಿಗಳು ಭಾನುವಾರ ನೋಟಿಸ್ ಜಾರಿ ಮಾಡಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರು ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನ ದ ಆವರಣದಲ್ಲಿ ಶನಿವಾರ ಮತಯಾಚನೆ ಮಾಡಿದ್ದಾರೆ ಎಂದು ಬಿ.ಶ್ರೀರಾಮುಲು ಪರ ವಕೀಲರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕುರಿತು ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಿ.ಶ್ರೀರಾಮುಲು ಅವರು ತಾಲ್ಲೂಕಿನ ಜೋಳದರಾಶಿ ಗ್ರಾಮದಲ್ಲಿ ಮತದಾರರಿಗೆ ಊಟದ ವ್ಯವಸ್ಥೆ ಮಾಡಿಸಿದ್ದಾರೆ ಎಂದು ಬಿಜೆಪಿ ದೂರು ನೀಡಿದ್ದರಿಂದ ಶ್ರೀರಾಮುಲು ಅವರಿಗೂ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆಗಿಳಿದಿರುವ ಚೆನ್ನಪ್ಪ, ಗಂಗಾಧರ ಹಾಗೂ ಚೇಳ್ಳಗುರ್ಕಿ ಅಂಜಿನಪ್ಪ ಅವರು ಚುನಾವಣಾ ವೆಚ್ಚದ ಕುರಿತು ಮೊದಲ ಹಂತದ ಮಾಹಿತಿ ನೀಡಿಲ್ಲ ಎಂಬ ಕಾರಣದಿಂದ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಬದಲಾವಣೆಗೆ ಕೋರಿಕೆ:
ಶಾಸಕ ಜಿ.ಸೋಮಶೇಖರರೆಡ್ಡಿ ಅವರ ಸಹಪಾಠಿ, ಸ್ನೇಹಿತ ಬಳ್ಳಾರಿ ತಹಶೀಲ್ದಾರ್ ಶಶಿಧರ ಬಗಲಿ ಅವರು ಬಿ.ಶ್ರೀರಾಮುಲು ಅವರ ಅಧಿಕೃತ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಚುನಾವಣಾ ಕಾರ್ಯದಿಂದ ಮುಕ್ತಗೊಳಿಸಬೇಕು ಎಂದು ಕೋರಿ ಬಿಜೆಪಿ ಚುನಾವಣಾ ಆಯೋಗಕ್ಕೆ ಭಾನುವಾರ ಮನವಿ ಮಾಡಿದೆ.
ಜಿ.ಜನಾರ್ದನರೆಡ್ಡಿ ಮಾಲೀಕತ್ವದ ಎನೋಬಲ್ ಇಂಡಿಯಾ ಫೈನಾನ್ಸ್ ಕಂಪೆನಿಯಲ್ಲಿ ಈ ಹಿಂದೆ ನೌಕರಿ ಮಾಡಿರುವ ಶಶಿಧರ ಬಗಲಿ, ಸೋಮಶೇಖರ ರೆಡ್ಡಿ ಅವರ ಸಹಪಾಠಿಯೂ, ಸ್ನೇಹಿತರೂ ಆಗಿದ್ದಾರೆ. ಅವರು ಶ್ರೀರಾಮುಲು ಪರ ಮೃಧು ಧೋರಣೆ ತಳೆದು ಕೆಲಸ ಮಾಡುತ್ತಿರುವುದು ಕಂಡುಬಂದಿದ್ದು, ಕೂಡಲೇ ಅವರನ್ನು ಚುನಾವಣಾ ಕಾರ್ಯದಿಂದ ಮುಕ್ತಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Related posts

Leave a Comment