You are here
Home > Koppal News > ಜಿಲ್ಲೆಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ

ಜಿಲ್ಲೆಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ

ಕೊಪ್ಪಳ ನ.  : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ನ. ೧೯ ರಿಂದ ೨೫ ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಗುತ್ತಿದೆ.
  ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ.  ನ. ೧೯ ರಿಂದ ೨೫ ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನ. ೧೯ ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಪ್ರಮಾಣ ವಚನ ಸ್ವೀಕರಿಸಿ .  ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ.  ಅಲ್ಲದೆ ನಾನು ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲ, ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆಂಬುದಾಗಿ ಪ್ರತಿಜ್ಞೆಗೈದರು. ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸಿದರು ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
  ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನ. ೨೦ ರಂದು ಅಲ್ಪಸಂಖ್ಯಾತರ ಕಲ್ಯಾಣ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಅಂದು ಮಧ್ಯಾಹ್ನ ೧೨ ಗಂಟೆಗೆ ಕೊಪ್ಪಳದ ಸ್ಟೇಷನ್ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಜರುಗಲಿದೆ.  ಅದೇ ರೀತಿ ನ. ೨೧ ರಂದು ಮಧ್ಯಾಹ್ನ ೧೨ಕ್ಕೆ ಕೊಪ್ಪಳದ ಹಿಂದಿ ಬಿ.ಇಡಿ. ಕಾಲೇಜಿನಲ್ಲಿ ಭಾಷಾ ಸೌಹಾರ್ದತಾ ದಿನ, ನ. ೨೨ ರಂದು ಮಧ್ಯಾಹ್ನ ೧೨ಕ್ಕೆ ಕೊಪ್ಪಳ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ದುರ್ಬಲ ವರ್ಗಗಳ ದಿನ, ನ. ೨೩ ರಂದು ಮಧ್ಯಾಹ್ನ ೧೨ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಸಾಂಸ್ಕೃತಿಕ ಏಕತಾ ದಿನ, ನ. ೨೪ ರಂದು ಮಧ್ಯಾಹ್ನ ೧೨ಕ್ಕೆ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ದಿನ ಹಾಗೂ ನ. ೨೫ ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾಢಳಿತ ಭವನದ ಆಡಿಟೋರಿಯಂ ನಲ್ಲಿ ಪರಿಸರ ರಕ್ಷಣಾ ದಿನ ಆಚರಿಸಲಾಗುವುದು.  ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Top