ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ಮಾಡಲು ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರು ಸೂಚನೆ ನೀಡಿದ್ದು, ಆಸಕ್ತ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಆನ್‌ಲೈನ್ ಮೂಲಕ ಜೂ.೦೪ ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಹಾಜರಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜೂ.೦೫ ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಬ್ಲಾಕ್‌ನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಅಥವಾ ಇಲಾಖೆಯ ವೆಬ್‌ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನ್ನು ಅಥವಾ ಉಪನಿರ್ದೇಶಕ ಕಛೇರಿಯ ಸಹಾಯವಾಣಿ ಸಂಖ್ಯೆ : ೦೮೫೩೯-೨೨೧೩೦೩ ಗೆ ಕರೆ ಮಾಡಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ   ತಿಳಿಸಿದ್ದಾರೆ. 
Please follow and like us:
error