ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ : ನದಿ ಪಾತ್ರದ ಜನರಿಗೆ ಎಚ್ಚರಿಕೆ

 ತುಂಗಭದ್ರಾ ಜಲಾಶಯ ಭರ್ತಿಗೆ ಕೇವಲ ೦೪ ಅಡಿ ಮಾತ್ರ ಬಾಕಿ ಇದ್ದು, ಜಲಾಶಯದಿಂದ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆಗಳಿವೆ.  ಆದ್ದರಿಂದ ನದಿ ಪಾತ್ರದ ಜನರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಹೆಚ್. ಮಂಜಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.
  ತುಂಗಭದ್ರಾ ಜಲಾಶಯದ ಈಗಿನ ಮಟ್ಟ ೧೬೨೯ ಅಡಿಗಳಾಗಿದ್ದು, ಒಳಹರಿವು ೬೫೦೦೦ ಕ್ಯೂಸೆಕ್ ಇದೆ.  ಜಲಾಶಯದ ಗರಿಷ್ಠ ಮಟ್ಟ ೧೬೩೩ ಅಡಿಗಳಿದ್ದು, ಜಲಾಶಯ ಭರ್ತಿಗೆ ಕೇವಲ ೦೪ ಅಡಿಗಳು ಮಾತ್ರ ಬಾಕಿ ಇದೆ.  ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ನದಿಗೆ ಕ್ರಸ್ಟ್ ಗೇಟ್‌ಗಳ ಮೂಲಕ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆಗಳಿದ್ದು, ನದಿ ಪಾತ್ರದ ಸಾರ್ವಜನಿಕರು ಜನ-ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಹೆಚ್. ಮಂಜಪ್ಪ ಎಚ್ಚರಿಕೆ ನೀಡಿದ್ದಾರೆ.
Please follow and like us:
error