ಜನೇವರಿ ೦೬ ರಂದು ಜೆಡಿಎಸ್ ಪಕ್ಷದ ಟಿಕೇಟ್ ಆಕಾಂಕ್ಷಿಗಳ ಸಭೆ.

ಕೊಪ್ಪಳ-04- ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಚುನಾವಣೆ ನಿಮಿತ್ಯ ಜನೇವರಿ ೦೬ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಪಾರ್ಥ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಗಳ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಸೇರಿದಂತೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಆಗಮಿಸುವರು, ಈ ಸಭೆಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಟಿಕೇಟ್ ಆಕಾಂಕ್ಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಂಡು ಸಭೆಯನ್ನು ಯಶಸ್ವೀಗೊಳಿಸುವಂತೆ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಪ್ರದೀಪ್‌ಗೌಡ ಮಾಲೀಪಾಟೀಲ್ ತಿಳಿಸಿದ್ದಾರೆ.
Please follow and like us:
error