ಜೂ.೧೨ ರಂದು ಜಿ.ಪಂ. ಸಾಮಾನ್ಯ ಸಭೆ

 ಕೊಪ್ಪಳ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆ ಜೂ.೧೨ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ .
  ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ ಅವರು ವಹಿಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯಲ್ಲಿನ ಕುಡಿಯುವ ನೀರು ಯೋಜನೆಗಳ ಅನುಷ್ಠಾನ, ಬರಪರಿಹಾರ ಕಾಮಗಾರಿಗಳು, ೨೦೧೩-೧೪ನೇ ಸಾಲಿನ ಅಂತ್ಯಕ್ಕೆ ವಿವಿಧ ಯೋಜನೆಗಳ ಅನುಷ್ಠಾನ, ರಾಜೀವಗಾಂಧಿ ಕುಡಿಯುವ ನೀರಿನ ಯೋಜನೆಗಳ ವಿವರ, ಸಮಾಜ ಕಲ್ಯಾಣ ಮತ್ತು ಆರೋಗ್ಯ ಇಲಾಖೆಗಳ ವಿವಿಧ ಯೋಜನೆಗಳ ಅನುಷ್ಠಾನ, ವೈಯಕ್ತಿಕ ಶೌಚಾಲಯಗಳ ಪ್ರಗತಿ, ಕಸವಿಲೇವಾರಿ ಜಾರಿ, ೨೦೧೪-೧೫ನೇ ಸಾಲಿನ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ  ತಿಳಿಸಿದ್ದಾರೆ. 

Related posts

Leave a Comment