fbpx

ಜೂ.೧೫ ರಂದು ವಿಶ್ವ ಪರಿಸರ ದಿನಾಚರಣೆ

 ಜಿಲ್ಲಾಡಳಿತ, ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜೂ.೧೫ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ, ಟಿ.ಬಿ. ಡ್ಯಾಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಪರಿಸರ ಮತ್ತು ವನ್ಯಜೀವಿ ತಜ್ಞರಾದ ಅಬ್ದುಲ್ ಸಮದ್ ಕೊಟ್ಟೂರು ಅವರು ಆಗಮಿಸಲಿದ್ದಾರೆ.
Please follow and like us:
error

Leave a Reply

error: Content is protected !!