ಕೊಪ್ಪಳ ಮಾ. ೧೪ ರಿಂದ ಡಿ. ದೇವರಾಜ ಅರಸು ಅಪೂರ್ವ ಛಾಯಾಚಿತ್ರ ಪ್ರದರ್ಶನ.

ಕೊಪ್ಪಳ ಮಾ. ೧೨ ಸಾಮಾಜಿಕ ಸುಧಾರಣೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮಶತಮಾನೋತ್ಸವದ (೧೯೧೫-೨೦೧೫) ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ದೇವರಾಜ ಅರಸು ಅವರ ಜೀವನ ಸಾಧನೆ ಕುರಿತ ಅಪೂರ್ವ ಛಾಯಾಚಿತ್ರಗಳ ಪ್ರದರ್ಶನವನ್ನು ನಗರದ ಸಾಹಿತ್ಯ ಭವನದಲ್ಲಿ ಮಾ. ೧೪ ಮತ್ತು ೧೫ ರಂದು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.
     ಭೂಸುಧಾರಣೆ ಕಾಯ್ದೆ, ಕೃಷಿ ಕಾರ್ಮಿಕರ ಕನಿಷ್ಠ ವೇತನ, ಮಲ ಹೊರುವ ಪದ್ದತಿ ನಿಷೇಧ, ಜೀತ ವಿಮುಕ್ತಿ, ಋಣ ಪರಿಹಾರ ಹೀಗೆ ಕರ್ನಾಟಕ ಬಹುಕಾಲ ನೆನಪು ಮಾಡಿಕೊಳ್ಳುವ ಹತ್ತಾರು ಅರ್ಥಪೂರ್ಣ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅರಸು ಅವರ ಜೀವನ ಸಾಧನೆಯನ್ನೊಳಗೊಂಡ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಮಾ. ೧೪ ಮತ್ತು ೧೫ ರಂದು ಎರಡು ದಿನಗಳ ಕಾಲ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.  ಮಾ. ೧೪ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಈ ವಿಶೇಷ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ನೆರವೇರಿಸುವರು.  ಛಾಯಾಚಿತ್ರ ಪ್ರದರ್ಶನವು ಮಾ. ೧೪ ಮತ್ತು ೧೫ ರಂದು ಎರಡು ದಿನಗಳ ಕಾಲ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಇರಲಿದೆ.  ಕೊಪ್ಪಳದ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಅವರು ತಿಳಿಸಿದ್ದಾರೆ.  ಎಲ್ಲ ಸಾರ್ವಜನಿಕರು, ನಗರದ ಎಲ್ಲ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಆಸಕ್ತರು, ಅರಸು ಅವರ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ.  ಮನವಿ ಮಾಡಿಕೊಂಡಿದ್ದಾರೆ.
Please follow and like us:
error