fbpx

ನಿವೇದಿತಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಕೊಪ್ಪಳ ೬೯ನೇ ಸ್ವಾತಂತ್ರ್ಯ ದಿನದ ಆಚರಣೆ.

ನಗರದ ಶ್ರೀ ವಿಠ್ಠಲ ಮಾದರಿ ನಗರದಲ್ಲಿರುವ ನಿವೇದಿತಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ೬೯ ನೇ ಸ್ವಾತಂತ್ರ್ಯ ದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ಪುಲಸ್ಕರ ಮತ್ತು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ವೆಂಕಟೇಶ ಪುಲಸ್ಕರ ಇವರು ಧ್ವಜಾರೊಹಣ ನೆರೆವೇರಿಸಿದರು. ಮುಖ್ಯ ಅತಿಥಿಗಳಾಗಿ ಎ.ಬಿ.ವಿ.ಪಿ ಕಾರ್ಯದರ್ಶಿಗಳಾದ ಸಂಕೇತ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ಯ್ರದಿಂದ ಭಾರತಕ್ಕೆ ಸಿಗಬೇಕಾದ ಅನುಕೂಲತೆಗಳ ಬಗ್ಗೆ ಮಾಹಿತಿ ತಿಳಿಸಿದರು ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಗುರುಗಳಾದ ವೀರಯ್ಯ ಶಂಕರವಾಡಿ ಮಠ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಕ್ಷಕರಾದ ಮಲ್ಲಿಕಾರ್ಜುನ ಕಾರ್ಯಕ್ರಮದ ವಂದನಾರ್ಪಣೆ ನೆರವೇರಿಸಿದರು.

Please follow and like us:
error

Leave a Reply

error: Content is protected !!