ಸಾಮಾಜಿಕ ಸಮಸ್ಯೆ ಕುರಿತು ಲೇಖನ-ವರದಿಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

 ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಒಂದು ಲಕ್ಷ ರೂ.ಗಳ ದತ್ತಿಯನ್ನು ಸ್ಥಾಪಿಸಿದ್ದು, ೨೦೧೨ ಮತ್ತು ೨೦೧೩ನೇ ಸಾಲಿನ ಪ್ರಶಸ್ತಿಗಾಗಿ ಆ ಸಾಲಿನಲ್ಲಿ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಎರಡು ವರ್ಷದ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ತಮ್ಮ ಸ್ವವಿವರಗಳನ್ನು ಬಿಳಿಹಾಳೆಯಲ್ಲಿ ಬರೆದು ’ಅಭಿಮಾನಿ ಪ್ರಶಸ್ತಿ-೨೦೧೨’, ’ಅಭಿಮಾನಿ ಪ್ರಶಸ್ತಿ-೨೦೧೩’ ಎಂದು ಪ್ರತ್ಯೇಕವಾಗಿ ವರ್ಷವನ್ನು ದಾಖಲಿಸಿ, ಆಯಾ ವರ್ಷದ ಅವಧಿಗೆ ಒಂದು ಲೇಖನವನ್ನು ಮಾತ್ರ ಕಳುಹಿಸಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳನ್ನು ನ.೨೫ ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇವರಿಗೆ ಸಲ್ಲಿಸಬಹುದಾಗಿದೆ  .
ಮಾನವೀಯ ಸಮಸ್ಯೆ ಕುರಿತು ಲೇಖನ-ವರದಿಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ
  ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಒಂದು ಲಕ್ಷ ರೂ.ಗಳ ದತ್ತಿಯನ್ನು ಸ್ಥಾಪಿಸಿದ್ದು, ೨೦೧೨ ಮತ್ತು ೨೦೧೩ನೇ ಸಾಲಿನ ಪ್ರಶಸ್ತಿಗಾಗಿ ಆ ಸಾಲಿನಲ್ಲಿ ಪ್ರಕಟವಾಗಿರುವ ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಎರಡು ವರ್ಷದ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ತಮ್ಮ ಸ್ವವಿವರಗಳನ್ನು ಬಿಳಿಹಾಳೆಯಲ್ಲಿ ಬರೆದು ’ಮೈಸೂರು ದಿಗಂತ ಪ್ರಶಸ್ತಿ-೨೦೧೨’, ”ಮೈಸೂರು ದಿಗಂತ ಪ್ರಶಸ್ತಿ-೨೦೧೩’ ಎಂದು ಪ್ರತ್ಯೇಕವಾಗಿ ವರ್ಷವನ್ನು ದಾಖಲಿಸಿ, ಆಯಾ ವರ್ಷದ ಅವಧಿಗೆ ಒಂದು ಲೇಖನವನ್ನು ಮಾತ್ರ ಕಳುಹಿಸಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳನ್ನು ನ.೨೫ ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇವರಿಗೆ ಸಲ್ಲಿಸಬಹುದಾಗಿದೆ .
Please follow and like us:
error