ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

 ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಮಾ.೧೨ ರಿಂದ ೨೭ ರವರೆಗೆ ಜಿಲ್ಲೆಯಲ್ಲಿ ಒಟ್ಟು ೧೩ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
  ಮಾ.೧೨ ರಿಂದ ಮಾ.೨೭ ರವರೆಗೆ ಪಿ.ಯು.ಸಿ. ಪರೀಕ್ಷೆ ನಡೆಸಲಾಗುತ್ತಿದ್ದು, ಅಂದು ಬೆಳಿಗ್ಗೆ ೯.೦೦ ರಿಂದ ಮಧ್ಯಾಹ್ನ ೧.೦೦ ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ೧೪೪ ಕಲಂ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಹಾಗೂ ನಿಷೇಧಾಜ್ಞೆಯನ್ವಯ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಎಸ್.ಟಿ.ಡಿ., ಮೊಬೈಲ್ ಪೇಜರ್, ಜೆರಾಕ್ಸ್ ಹಾಗೂ ಟೈಪಿಂಗ್ ಮುಂತಾದ ಕೇಂದ್ರಗಳನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಮದುವೆ, ಶವ ಸಂಸ್ಕಾರ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

Leave a Reply