You are here
Home > Koppal News > ಕಡ್ಡಾಯ ಶಿಕ್ಷಣ ಕಾಯ್ದೆ : ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಕಡ್ಡಾಯ ಶಿಕ್ಷಣ ಕಾಯ್ದೆ : ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಕೊಪ್ಪಳ ಜ.): ಪ್ರಸಕ್ತ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆ ಅಡಿ ಪ್ರವೇಶ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ನಡೆಸಲಾಗುತ್ತಿದ್ದು, ಪೋಷಕರು ತಮ್ಮ ನೆರೆಹೊರೆಯಲ್ಲಿರುವ ಅಲ್ಪ ಸಂಖ್ಯಾತವಲ್ಲದ ಅನುದಾನ ರಹಿತ ಶಾಲೆಗಳಿಗೆ ಆ ಶಾಲೆಯಲ್ಲಿ ಪ್ರಾರಂಭಿಕ ತರಗತಿಯಾದ ಎಲ್.ಕೆ.ಜಿ. ಅಥವಾ 1ನೇ ತರಗತಿಗೆ ಪ್ರವೇಶ ಕೋರಿ ಆನ್‍ಲೈನ್ ಮೂಲಕ ಆಧ್ಯತೆಯ ಮೇಲೆ ಐದು ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.ಅರ್ಜಿ ನಮೂನೆ ಮತ್ತು ಇತರೆ ಲಗತ್ತು ನಮೂನೆಗಳನ್ನು  www.schooleducation.kar.nic.in  ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿರುತ್ತದೆ. ನಗರ ಪ್ರದೇಶದಲ್ಲಿ ವಾಸಿಸುವ ವಾರ್ಡ್ ಒಳಗೆ ಇರುವ ಶಾಲೆಗಳನ್ನು ನೆರೆಹೊರೆಯ ಶಾಲೆಗಳೆಂದು, ಗ್ರಾಮಾಂತರ ಪ್ರದೇಶದಲ್ಲಿ ತಾವು ವಾಸಿಸುವ ಕಂದಾಯ ಗ್ರಾಮದ ವ್ಯಾಪ್ತಿಯಲ್ಲಿ ಇರುವ ಶಾಲೆಗಳನ್ನು ನೆರೆಹೊರೆಯ ಶಾಲೆಗಳೆಂದು ಪರಿಗಣಿಸಲಾಗಿದೆ. 2015-16ನೇ ಸಾಲಿನ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ದಿನಾಂಕ : 18.01.2015 ರಿಂದ 19.02.2015 ರವರೆಗೆ ನಿಗದಿಪಡಿಸಲಾಗಿದ್ದು, ಪೋಷಕರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿಯಲ್ಲಿ ಪ್ರವೇಶ ಕೋರಿ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಪೋಷಕರು, ಮಗುವಿನ ಭಾವಚಿತ್ರ, ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಮುಂತಾದ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲ ದಾಖಲೆಗಳೊಂದಿಗೆ ಪ್ರಥಮ ಆದ್ಯತೆ ಕೋರುವ ಶಾಲೆಗೆ ಭೇಟಿ ನೀಡಿ, ಶಾಲಾ ಮುಖ್ಯಸ್ಥರ ಮತ್ತು ಇಲಾಖಾ ಪ್ರತಿನಿಧಿಗಳ ಸಮ್ಮುಖದಲ್ಲಿ ದಾಖಲೆಗಳನ್ನು ಪರಿಶೀಲಿಸಿಕೊಂಡು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿಸಬಹುದಾಗಿದೆ.ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಪೋಷಕರು : ಅರ್ಜಿ ಸಲ್ಲಿಸಿದ ಮರುದಿನ ಪ್ರಥಮ ಆದ್ಯತೆ ನೀಡಿ ಪ್ರವೇಶ ಕೋರಿರುವ ಶಾಲೆಗೆ ಮೂಲ ದಾಖಲೆಗಳೊಂದಿಗೆ ಭೇಟಿ ನೀಡಿ, ಆನ್‍ಲೈನ್‍ನಲ್ಲಿ ಸಲ್ಲಿಸಿರುವ ದಾಖಲೆಗಳ ನೈಜತೆಯನ್ನು ಶಾಲಾ ಮುಖ್ಯಸ್ಥರು ಹಾಗೂ ಇಲಾಖಾ ಪ್ರತಿನಿಧಿಗಳ ಸಮ್ಮುಖದಲ್ಲಿ ಪರಿಶೀಲಿಸಿಕೊಳ್ಳಲು ತಿಳಿಸಲಾಗಿದೆ. ಒಮ್ಮೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಆಫ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ದಿನಾಂಕ : 26.02.2015 ರಂದು ಇಲಾಖಾ ವೇಳಾಪಟ್ಟಿಯ ಪ್ರಕಾರ ಅರ್ಹ ಮಕ್ಕಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಪಟ್ಟಿಯಲ್ಲಿ ಲೋಪದೋಷಗಳಿದ್ದಲ್ಲಿ ಸಂಬಂಧಿಸಿದ ಪೋಷಕರು, ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 27.02.2015 ರಿಂದ 02.03.2015 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೊಪ್ಪಳ ಇವರಿಗೆ ಆಕ್ಷೇಪಣೆ ಸಲ್ಲಿಸಬಹುದು. ಮಾರ್ಚ-09 ರಂದು ಆನ್‍ಲೈನ್ ಲಾಟರಿ ಮೂಲಕ ಆಯ್ಕೆ ಮಾಡಿದ ಮಕ್ಕಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು   ತಿಳಿಸಿದ್ದಾ

Leave a Reply

Top