ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಅಳವಂಡಿ ಕಾಲೇಜು ವಿದ್ಯಾರ್ಥಿಗಳ ಸಾಧನೆ

  ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ಪತ್ರಿಕೆ ಮತ್ತು ಸಮಾಜ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಕೊಪ್ಪಳ ತಾಲೂಕಿನ ಅಳವಂಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಚೇತನ ಸೊಬಗಿ, ಸಂಪತ್ ಆಕಳವಾಡಿ ಹಾಗೂ ಪ್ರವೀಣ ಕುಮಾರ ಕೀಲಿಪುಟ್ಟ ಇವರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದಾರೆ. ಸಂಪತ್ ಆಕಳವಾಡಿ ಅವರು ಮಾಧ್ಯಮ ಛಾಯಾಚಿತ್ರ ಗ್ರಹಣ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.  ಉತ್ತಮ ಸಾಧನೆಗೈದ ಕಾಲೇಜು ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು, ಕಾಲೇಜು ಅಭಿವೃದ್ದಿ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error