ಓಟು ಕೇಳಲು ಬಂದ ಸಚಿವೆ ಶೋಭಾಗೆ ಮಂಗಳಾರತಿ

ಬಳ್ಳಾರಿ ಗ್ರಾಮಾಂತರ ಉಪಚುನಾವಣೆ: 
ಬಳ್ಳಾರಿ: ಓಟು ಕೇಳಲು ಬಂದ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಮತದಾರರು ತರಾಟೆಗೆ ತೆಗೆದುಕೊಂಡ ಘಟನೆ ಬಳ್ಳಾರಿ ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಕೇಳಲು ಬಂದಾಗ ಅಲ್ಲಿನ ಮಹಿಳೆಯರು ಮೊದಲು ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ಕೊಡಿ ಆಮೇಲೆ ಓಟು ಕೇಳಿ ಎಂದಾಗ, ಕ್ಷಣ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ನಂತರ ಸಾವರಿಸಿಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಶಾಸಕರು ಸರಿಯಾಗಿ ಅಭಿವೃದ್ಧಿ ಕಡೆ ಗಮನ ಕೊಟ್ಟಿದ್ದರೇ ಈ ಪರಿಸ್ಧಿತಿ ನಿರ್ಮಾಣವಾಗುತ್ತಿರಲಿಲ್ಲ. ತಮ್ಮ ಅಧಿಕಾರವಧಿ ಉದ್ದಕೂ ತಮ್ಮನ್ನು ಸಚಿವ ಸ್ಥಾನದಿಂದ ಇಳಿಸಲು ಶ್ರಮಪಟ್ಟಿದ್ದಾರೆ ಎಂದು ಪರೋಕ್ಷವಾಗಿ ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡರು

Leave a Reply