ಚುನಾವಣೆ ನೀತಿ ಸಂಹಿತೆ : ಧಾರ್ಮಿಕ ಸ್ಥಳಗಳ ಬಳಕೆ ನಿಷೇಧ

  ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಚುನಾವಣೆ ಕುರಿತಂತೆ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಪರೋಕ್ಷವಾಗಿ ಅಥವಾ ಅಪರೋಕ್ಷವಾಗಿ ಚುನಾವಣಾ ಪ್ರಚಾರ ಕೈಗೊಳ್ಳುವಂತಹ ಯಾವುದೇ ಸಭೆ, ಸಮಾರಂಭ ಅಥವಾ ಇನ್ನಿತರೆ ಕಾರ್ಯಕ್ರಮ ಅಥವಾ ಚಟುವಟಿಕೆ ನಡೆಸುವುದನ್ನು  Religious Institutions (Prevention of Misuse)
Act, 1988 No. 41 of 1988
 ೧೯೮೮ ರನ್ವಯ ನಿಷೇಧಿಸಲಾಗಿದೆ.
  ಈ ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ : ಶಸ್ತ್ರಗಳನ್ನು ಒಪ್ಪಿಸಲು ಡಿ.ಸಿ. ಸೂಚನೆ
ಕೊಪ್ಪಳ ಮಾ. ೨೨(ಕರ್ನಾಟಕ ವಾರ್ತೆ): ವಿಧಾನಸಭೆ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಠಿಯಿಂದ, ಜಿಲ್ಲ್ಲೆಯಲ್ಲಿ ರೈತರು, ಗಣವ್ಯಕ್ತಿಗಳು ಮತ್ತು ಇತರರು ಹೊಂದಿರುವ ಶಸ್ತ್ರಗಳನ್ನು ಪೊಲೀಸ್ ಇಲಾಖೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚನೆ ನೀಡಿದ್ದಾರೆ.
ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಮೇ ೧೧ ರವರೆಗೆ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.  ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ನೀತಿಸಂಹಿತೆ ಮುಗಿಯುವವರೆಗೆ ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೆ ಸೂಚನೆ ನೀಡಲಾಗಿದೆ.  ಈ ಆದೇಶ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಆರ್.ಬಿ.ಐ. ನಿಂದ ಮಾನ್ಯತೆ ಪಡೆದಿರುವ ಬ್ಯಾಂಕುಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Please follow and like us:
error