ವಿದ್ಯಾರ್ಥಿವೇತನ ಸ್ವಯಂ ಘೋಷಿತ ದಾಖಲೆಗಳನ್ನು ಸಲ್ಲಿಸಲು ಸೂಚನೆ.

ಕೊಪ್ಪಳ, ಜು.೨೯  ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ  ಸ್ವಯಂ ಘೋಷಿತ ದಾಖಲೆಗಳನ್ನು ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ್ ಸೂಚಿಸಿದ್ದಾರೆ. ಇಲಾಖೆಯಿಂದ ನೀಡಲಾಗುವ ಪ್ರಸಕ್ತ ಸಾಲಿನ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು, ಮತ್ತು ಪಾರ್ಸಿ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ತಹಶೀಲ್ದಾರರು ನೀಡುವ ಆದಾಯ ಪ್ರಮಾಣ ಪತ್ರ ಅಥವಾ ಪಡಿತರ ಚೀಟಿಯ ನಕಲು ಪ್ರತಿಯನ್ನು ಸಲ್ಲಿಸುವ ಅಗತ್ಯತೆ ಇಲ್ಲ. ಬದಲಾಗಿ ಸ್ವಯಂ ಘೋಷಿತ ಕುಟುಂಬದ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬಹುದಾಗಿದೆ. ಅಂದರೆ ಅರ್ಜಿಯೊಂದಿಗೆ ಸ್ವಯಂ ಘೋಷಿತ  ಪ್ರಮಾಣ ಪತ್ರ(ಧಾರ್ಮಿಕ), ಸ್ವಯಂ ದೃಢೀಕೃತ ಹಿಂದಿನ ತರಗತಿಯ ಅಂಕಪಟ್ಟಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಪ್ರತಿಯನ್ನು ಕಛೇರಿಯ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ವೆಬ್‌ಸೈಟ್
www.gokdom.kar.nic.in
ನ್ನು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದುತಿಳಿಸಿದೆ.   
Please follow and like us:
error