ಮಾದಿನೂರು ನವಗ್ರಾಮದಲ್ಲಿ ಆಸರೆ ಮನೆ ಉದ್ಘಾಟಿಸಿದರು

ಕೊಪ್ಪಳ ತಾಲೂಕಿನ ಸ್ಥಳಾಂತರಗೊಂಡ ಮಾದಿನೂರು ನವಗ್ರಾಮದಲ್ಲಿ ಆಸರೆ ಮನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಉದ್ಘಾಟಿಸಿದರು, ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಸಂಸದ ಶಿವರಾಮಗೌಡ, ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕರಡಿ ಸಂಗಣ್ಣ, ಶಾಸಕರುಗಳಾದ ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Please follow and like us:
error