ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ನಾಗರಾಜ ಸುಣಗಾರ

ಕೊಪ್ಪಳ ಡಿ ೧೫:ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯ ಟಿ.ವಿ. ವರದಿಗಾರರಾದ ನಾಗರಾಜ ಸುಣಗಾರ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ನಗರದ ವಾರ್ತಾಭವನದಲ್ಲಿ ಇಂದು ನಡೆದ ಸಂಘದ ತುರ್ತು ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಎಚ್.ಎಸ್. ಹರೀಶ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಉಪಾಧ್ಯಕ್ಷರಾಗಿದ್ದ ನಾಗರಾಜ ಸುಣಗಾರ ಅವರನ್ನ ಸರ್ವಾನುಮತದಿಂದ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರೀಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ನಾಗರಾಜ ಸುಣಗಾರ, ಪತ್ರಕರ್ತರ ಸಂಘವನ್ನು ಸಂಘಟನಾತ್ಮಕವಾಗಿ ಬಲಪಡಿಸಿ, ಸಂಘದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದರು.ಇದೇ ವೇಳೆ ಸಂಘದ ವಿವಿಧ ಪದಾಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಿ, ನಡುವಳಿಕೆಗಳನ್ನ ಪಾಸು ಮಾಡಲಾಯಿತು. 
Please follow and like us:
error