fbpx

ರಾಜ್ಯ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಮಾ.   : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್. ಕಾಂತರಾಜ ಅವರು ಮಾ. ೨೫ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
  ಆಯೋಗದ ಅಧ್ಯಕ್ಷ ಹೆಚ್. ಕಾಂತರಾಜ ಅವರು ಅಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿರುವ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ ೩ ಗಂಟೆಗೆ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಾಂಖ್ಯಿಕ ಸಮಗ್ರಹಣಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ನಂತರ ಸಂಜೆ ೪-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುವರು.  ಆಯೋಗದ ಅಧ್ಯಕ್ಷರು ಅದೇ ದಿನ ಸಂಜೆ ೬ ಗಂಟೆಗೆ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು.
Please follow and like us:
error

Leave a Reply

error: Content is protected !!