You are here
Home > Koppal News > ಹೊಸಳ್ಳಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಚಾಲನೆ

ಹೊಸಳ್ಳಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಚಾಲನೆ

koppal : ಕೊಪ್ಪಳ ಕ್ಷೇತ್ರದ ಜನತೆಗೆ ನೀಡಿದ ಭರವಸೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಹೇಳಿದರು.
  ತಾಲೂಕಿನ ಹೊಸಳ್ಳಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ೩೫ ಲಕ್ಷ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
  ಈ ಭಾಗದ ಜನತೆಗೆ ನೀಡಿದ ಭರವಸೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು.  ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.  ಸರ್ಕಾರವು ಜಾತ್ಯಾತೀತವಾಗಿ ಎಲ್ಲಾ ಸಮುದಾಯದವರಿಗೆ ಹಲವಾರು ಯೋಜನೆಗಳನ್ನು ನೀಡುತ್ತಿದೆ.  ದಲಿತರು ಕೀಳರಿಮೆ ತೊರೆದು, ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು.  ಇದಕ್ಕಾಗಿ ಅವರು ಶಿಕ್ಷಣ ಹೊಂದುವುದು ಅಗತ್ಯವಾಗಿದೆ.  ಹೊಸಳ್ಳಿ ಗ್ರಾಮವು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಇರುವುದರಿಂದ ಈ ಗ್ರಾಮದಲ್ಲಿ ಕುಡಿಯುವ ನೀರು ಮತ್ತು ಸುತ್ತಮುತ್ತಲಿನ ನೈರ್ಮಲ್ಯದ ಬಗ್ಗೆ ಜನರು ಕಾಳಜಿ ವಹಿಸಬೇಕು.  ಗ್ರಾಮದ ಪ್ರಜ್ಞಾವಂತರು ಹಾಗೂ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಶಾಸಕ ಸಂಗಣ್ಣ ಕರಡಿ ಅವರು ಕರೆನೀಡಿದರು. 
  ಹೊಸಳ್ಳಿ ಗ್ರಾಮದಲ್ಲಿ ೧೦ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗಾಳೆಮ್ಮ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ಶಾಸಕ ಸಂಗಣ್ಣ ಕರಡಿ ಅವರು ನಡೆಸಿದರು.  ಗಣ್ಯರಾದ ಮರ್ದಾನಪ್ಪ ಬಿಸರಳ್ಳಿ, ಮಂಜುನಾಥ ಗಾಳಿ, ವಿ.ಆರ್. ಪಾಟೀಲ, ದಾವಲಸಾಬ ಬಿಸರಳ್ಳಿ, ಬಸವರಾಜ ಕಂಬಳಿ, ಬಸವರಾಜ ಕೆ., ಹನುಮಂತಪ್ಪ ಮೆಟ್ಟಿನ, ಮಂಜುನಾಥ ಕಲಾಲ, ಹುಲಿಯಪ್ಪ, ಗ್ರಾ.ಪಂ. ಸದಸ್ಯರುಗಳಾದ ಬಾಲಚಂದ್ರ, ಶಂಕ್ರಪ್ಪ, ಖಾಜಾವಲಿ ಕಿನ್ನಾಳ, ವಸಂತ ನಾಯಕ, ವೆಂಕಟೇಶ ಅಗಸಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Top