You are here
Home > Koppal News > ಕೊಪ್ಪಳ : ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

ಕೊಪ್ಪಳ : ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

 ಕೊಪ್ಪಳದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಗಳು ಮೇ. ೧೨ ಮತ್ತು ೧೩ ರಂದು ಎರಡು ದಿನಗಳ ಕಾಲ ಸುಗಮವಾಗಿ ಜರುಗಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಾನಂದ ಕಡಪಟ್ಟಿ ಅವರು ತಿಳಿಸಿದ್ದಾರೆ.
   ಮೇ.೧೨ ಮತ್ತು ೧೩ ರಂದು ಎರಡು ದಿನಗಳ ನಗರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲ್ಲಿ ನಡೆದ ಈ ಪರೀಕ್ಷೆಗಳು ಸುಗಮ ಮತ್ತು ಶಾಂತಿಯುತವಾಗಿ ಜರುಗಿದವು.  ಸಾಮಾನ್ಯ ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು ೧೦೦೨ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಜೀವಶಾಸ್ತ್ರ ವಿಷಯದ ಪರೀಕ್ಷೆಗೆ ೮೬೪ ವಿದ್ಯಾರ್ಥಿಗಳು ಹಾಜರಾಗಿದ್ದು, ೧೩೮ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಗಣಿತ ಪರೀಕ್ಷೆಗೆ ೯೬೬ ವಿದ್ಯಾರ್ಥಿಗಳು ಹಾಜರಾಗಿದ್ದು, ೩೬ ವಿದ್ಯಾರ್ಥಿಗಳು ಗೈರಾಗಿದ್ದರು. ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ೯೭೮ ವಿದ್ಯಾರ್ಥಿಗಳು ಹಾಜರಾಗಿದ್ದು, ೨೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಹಾಗೂ ರಸಾಯನ ಶಾಸ್ತ್ರ ವಿಷಯದ ಪರೀಕ್ಷೆಗೆ ೯೭೭ ವಿದ್ಯಾರ್ಥಿಗಳು ಹಾಜರಾಗಿ, ೨೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Top