ಕುಷ್ಟಗಿ: ನ್ಯಾಯಾಲಯ ಸಂಕೀರ್ಣ ಹಾಗೂ ವಸತಿ ಗೃಹಗಳ ಉದ್ಘಾಟನೆ

 ಕುಷ್ಟಗಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನ್ಯಾಯಾಲಯಗಳ ಸಂಕೀರ್ಣ ಹಾಗೂ ನ್ಯಾಯಾಧೀಶರುಗಳ ವಸತಿ ಗೃಹಗಳ ಉದ್ಘಾಟನೆ ಸಮಾರಂಭ ಕುಷ್ಟಗಿಯಲ್ಲಿ ಜು.೨೦ ರಂದು ಬೆಳಿಗ್ಗೆ ೧೦.೩೦ ಕ್ಕೆ ಜರುಗಲಿದೆ. 
 ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಸ್.ಎನ್.ಸತ್ಯನಾರಾಯಣ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಭಾರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ. ಬಬಲಾದಿ   ತಿಳಿಸಿದ್ದಾರೆ.  

Leave a Reply