ಕರಡು ಮತದಾರರ ಪಟ್ಟಿ ಪ್ರಕಟ ಆಕ್ಷೇಪಣೆ ಆಹ್ವಾನ.

ಕೊಪ್ಪಳ, ಡಿ.೧೬ (ಕ ವಾ) ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸಾರ್ವತ್ರಿಕ ಚುನಾವಣೆಗಳ ಕರಡು ಮತದಾರರ ಪಟ್ಟಿಗಳನ್ನು ಡಿ.೧೫ ಮಂಗಳವಾರದಂದು ಪ್ರಕಟಿಸಲಾಗಿದ್ದು, ಪಟ್ಟಿ ಕುರಿತಾಗಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. 
     ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸಾರ್ವತ್ರಿಕ ಚುನಾವಣೆಗಳು-೨೦೧೬ ರ ಸಲುವಾಗಿ ಕೊಪ್ಪಳ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ನಾಲ್ಕೂ ತಾಲೂಕು ಪಂಚಾಯತ್‌ಗಳ ಮತಗಟ್ಟೆವಾರು ಕರಡು ಮತದಾರರ ಪಟ್ಟಿಗಳನ್ನು ಡಿ.೧೫ ರಂದು ಆಯಾ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ತಹಶೀಲ್ದಾರರ ಕಾರ್ಯಾಲಯಗಳಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿ ಕುರಿತಾಗಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ.೨೨ ರೊಳಗಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರ ಕಾರ್ಯಾಲಯದ ಚುನಾವಣೆ ಶಾಖೆಯಲ್ಲಿ ಖುದ್ದಾಗಿ ಲಿಖಿತ ಆಕ್ಷೇಪಣೆಗಳನ್ನು, ಪೂರಕ ದಾಖಲೆಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ  ಎಂ.ಕನಗವಲ್ಲಿ ಅವರು ತಿಳಿಸಿದ್ದಾರೆ.
Please follow and like us:
error