ಸೀರೆ ಹಂಚಿ ಹೋದ ಮುಖ್ಯಮಂತ್ರಿಗಳು


ಕೊಪ್ಪಳ : ಬಸಾಪೂರದಲ್ಲಿ ನಡೆದ ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸೀರೆ ಹಂಚುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಮಾಶಾಸನ,ವಿಧವಾ ವೇತನವನ್ನು ಬ್ಯಾಂಕ್ ಗಳ ಮೂಲಕ ಹಂಚಲಾಗುವುದು ಎಂದು ಪ್ರಕಟಿಸಿದರು. ಬಾಂಡ್ ವಿತರಿಸುವಲ್ಲಿ ಅಲಕ್ಷ್ಯ ತೋರುವ ಮತ್ತು ದುಡ್ಡು ಕೇಳುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ಮಕ್ಕಳ ಕಲ್ಯಾಣ ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಭಲಿ ಪ್ರತಿಭಟನೆ ನಡೆಸಿದ ರೈತರನ್ನು ಬಂಧಿಸಿ ಕಾರ್ಯಕ್ರಮ ಮುಗಿದ ನಂತರ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳ ಆಗಮಿಸಿದ್ದರು. ಅವರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ವಿವಿದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ಮಾಡಿದರು.
Please follow and like us:
error