ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಗೊಂಡಬಾಳ

ಕೊಪ್ಪಳ, ಸೆ. ೨. ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳರವರ ಆದೇಶದ ಮೇರೆಗೆ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಜಿ. ಗೊಂಡಬಾಳರನ್ನು ನೇಮಕ ಮಾಡಿದ್ವಾರೆ.
ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ರಾಜ್ಯಾಧ್ಯಕ್ಷ ಅನಂತಯ್ಯರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳರವರು ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಆದೇಶ ಪತ್ರವನ್ನು ಮಂಜುನಾಥ ಜಿ. ಗೊಂಡಬಾಳಗೆ ನೀಡಿದರು. ಇದೇ ಸಂದರ್ಭದಲ್ಲಿ ಬಂದ ಚುನಾವಣೆಯಲ್ಲಿ ಜೆಡಿಎಸ್  ಗೆಲ್ಲಲು ಶ್ರಮಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಪಂಗಡ ದ ವಿವಿಧ ಜಿಲ್ಲಾ ಹಾಗೂ ತಾಲೂಕ ಮತ್ತು ಅಗತ್ಯ ಹೋಬಳಿ ಘಟಕಗಳನ್ನು ಜಿಲ್ಲಾ ಅಧ್ಯಕ್ಷರ ಸಲಹೆ ಪಡೆದು ರಚಿಸುವಂತೆ ರಾಜ್ಯಾಧ್ಯಕ್ಷ ಅನಂತಯ್ಯರವರು ತಿಳಿಸಿದ್ದಾರೆ. 
Please follow and like us:
error