ಅಪಘಾತ ಗಾಯಾಳುಗಳ ಚಿಕಿತ್ಸೆಗೆ ನೆರವಾದವರಿಗೆ ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ

ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಾಯಾಳುವಿಗೆ ನೆರವು ನೀಡಿದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಹರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಪಘಾತದಂತಹ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ಚಿಕಿತ್ಸೆಗೆ ಹಾಗೂ ಜೀವ ಉಳಿಸಲು ನೆರವಾಗುವವರಿಗೆ ಜೀವರಕ್ಷಕ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಲಾಗುವುದು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಂತ್ವಾನ ಹರೀಶ್ ಯೋಜನೆಯಡಿ ರಸ್ತೆ ಅಪಘಾತದ ಗಾಯಾಳುವಿಗೆ ೪೮ ಗಂಟೆಯೊಳಗಾಗಿ ಗರಿಷ್ಠ ರೂ.೨೫ ಸಾವಿರ ವರೆಗೆ ಎಲ್ಲಾ ಸರಕಾರಿ ಮತ್ತು ಖಾಸಗಿ ನೋಂದಾಯಿತ ಸಂಪರ್ಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತದಂತಹ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ಚಿಕಿತ್ಸೆ ಹಾಗೂ ಜೀವ ಉಳಿಸಲು ನೆರವಾಗುವವರಿಗೆ ಜೀವ ರಕ್ಷಕ ಪ್ರಶಸ್ತಿಒ ನೀಡಿ ಗೌರವಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ-೨೦ ರಲ್ಲಿ ಪಡೆದು ಜ.೧೧ ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರು, ಕೊಪ್ಪಳ, ಮೊ-೭೭೬೦೯೯೯೧೧೪, ೭೭೬೦೯೯೯೦೯೮ ಇವರನ್ನು ಸಂಪರ್ಕಿಸಬಹುದು

Leave a Reply