ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಡಾಟಾ ಎಂಟ್ರಿ ಆಪರೇಟರ್ ನೇಮಕ : ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯ ಕುಷ್ಟಗಿ, ಗಂಗಾವತಿ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ಮಾಹಿತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದವರಿಗೆ ಇಲಾಖೆಯಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ಒದಗಿಸುವ ಸಲುವಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿ, ಗಂಗಾವತಿ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ಮಾಹಿತಿ ಕೇಂದ್ರ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರತಿ ಮಾಹಿತಿ ಕೇಂದ್ರಕ್ಕೆ ಒಬ್ಬರಂತೆ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಏಜೆನ್ಸಿ ಮುಖಾಂತರ ಭರ್ತಿ ಮಾಡಲಾಗುವುದು. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಮಾನ್ಯತೆ ಹೊಂದಿದ ಸಂಸ್ಥೆಯಿಂದ ೦೧ ವರ್ಷದ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿರಬೇಕು. ಕಡ್ಡಾಯವಾಗಿ ಉರ್ದು ಭಾಷೆ ಬಲ್ಲವರಾಗಿರಬೇಕು. ಎಂ.ಎಸ್. ಆಫೀಸ್, ಇ-ಮೇಲ್, ಇಂಟರ್‌ನೆಟ್ ಬ್ರೌಸಿಂಗ್ ಹಾಗೂ ವೆಬ್ ಪೇಜ್ ಅಪ್ಲಿಕೇಷನ್ ಕುರಿತು ಸಂಪೂರ್ಣ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ ನೊಂದಿಗೆ ವಿದ್ಯಾರ್ಹತೆಗೆ ಸಂಬಂಧಿತ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಗೆ ಡಿ. ೨೧ ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು .

Leave a Reply