ಆರ್. ರಾಮಚಂದ್ರನ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

%e0%b2%95%e0%b3%8a%e0%b2%aa%e0%b3%8d%e0%b2%aa%e0%b2%b3_%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf_%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95_%e0%b2%b8%e0%b3%81ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಬೆಳಗಾವಿ ಜಿಲ್ಲೆಗೆ ಜಿಪಂ ಸಿಇಓ ಆಗಿ ವರ್ಗಾವಣೆಗೊಂಡ ಆರ್. ರಾಮಚಂದ್ರನ್ ಅವರಿಗೆ ಕೊಪ್ಪಳ ಜಿಲ್ಲಾ ಪಂಚಾಯತಿ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಸೋಮವಾರದಂದು ಆತ್ಮೀಯವಾಗಿ ಬೀಳ್ಕೊಡಲಾಯಿತು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಉಪಾಧ್ಯಕ್ಷೆ ಲಕ್ಷಮ್ಮ ನೀರಲೂಟಿ, ಜಿ.ಪಂ. ಸದಸ್ಯ ಭೀಮಣ್ಣ ಅಗಸಿ ಮಂದಿನ, ಉಪಕಾರ್ಯದರ್ಶಿ ಎನ್.ಕೆ. ತೊರವಿ ಅವರು ಆರ್. ರಾಮಚಂದ್ರನ್ ಅವರಿಗೆ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ರಾಮಚಂದ್ರನ್ ಅವರಿಗೆ ಸನ್ಮಾನಿಸಿ ಬೀಳ್ಕೊಟ್ಟರು. ವಿವಿಧ ತಾಲೂಕು ಪಂಚಾಯತಿ ಕಚೇರಿ, ಗ್ರಾ.ಪಂ. ಗಳ ಪಿಡಿಓ ಗಳು ಕೂಡ ರಾಮಚಂದ್ರನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು. ಕೊಪ್ಪಳ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ವೆಂಕಟರಾಜಾ ಅವರನ್ನು ಹಾಗೂ ನೂತನ ಉಪವಿಭಾಗಾಧಿಕಾರಿಯಾಗಿ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಗುರುದತ್ ಹೆಗ್ಡೆ ಅವರನ್ನು ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿಗಳು ನಿಕಟಪೂರ್ವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಗ್ರಾ.ಪಂ. ಗಳ ಪಿಡಿಓಗಳು, ಜಿ.ಪಂ. ಕಚೇರಿಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮಚಂದ್ರನ್ ಅವರಿಗೆ ಬೀಳ್ಕೊಟ್ಟರು.

Leave a Reply