You are here
Home > Koppal News-1 > koppal news > ಆ. ೧೫ ರಂದು ಸ್ವಾತಂತ್ರ್ಯ ದಿನಾಚರಣೆ : ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ

ಆ. ೧೫ ರಂದು ಸ್ವಾತಂತ್ರ್ಯ ದಿನಾಚರಣೆ : ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ

01

ಕೊಪ್ಪಳ ಜಿಲ್ಲಾ02ಡಳಿತದಿಂದ ಸ್ವಾತಂತ್ರ ದಿನಾಚರಣೆ ಸಮಾರಂಭ ಆ. ೧೫ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಕೊಪ್ಪಳ ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎಸ್ ವಸ್ತ್ರದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಧ್ವಜಾರೋಹಣ ನಂತರ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್‌ಸಿಸಿ, ಸೇವಾ ದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ ಹಾಗೂ ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸ್ವಾತಂತ್ರ್ಯ ಯೋಧರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಅದೇ ದಿನ ಸಂಜೆ ೬ ಗಂಟೆಗೆ ನಗರದ ಬಾಲಕಿಯರ ಕಾಲೇಜು ಹತ್ತಿರದ ಸಾರ್ವಜನಿಕ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

Leave a Reply

Top