ಆ. 25 ರಂದು ಶ್ರೀ ಕೃಷ್ಣ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆ. 25 ರಂದು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರು ಹೇಳಿದರು.

krishna-jayanti
ಶ್ರೀ ಕೃಷ್ಣ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ಕೃಷ್ಣ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಮುದಾಯದವರ, ಸಂಘಟನೆಗಳ, ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು.    ಜಿಲ್ಲಾ ಕೇಂದ್ರದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಸರ್ಕಾರ 50 ಸಾವಿರ ರೂ. ಹಾಗೂ ತಾಲೂಕು ಮಟ್ಟದಲ್ಲಿ 25 ಸಾವಿರ ರೂ. ಅನುದಾನ ಒದಗಿಸಿದೆ.  ಆ. 25 ರಂದು ಬೆಳಿಗ್ಗೆ 10 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಶ್ರೀಕೃಷ್ಣ ಜಯಂತಿ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.  ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ಸಂಸದರು ಹಾಗೂ ವಿವಿಧ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು. ವೇದಿಕೆ ಸಮಾರಂಭದ ನಂತರ ಬೆಳಿಗ್ಗೆ 11-30 ಗಂಟೆಗೆ ಸಾಹಿತ್ಯ ಭವನದಿಂದ ಶ್ರೀ ಕೃಷ್ಣ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಲಿದ್ದು, ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಬ ಮಾರ್ಗವಾಗಿ ಸಿರಸಪ್ಪಯ್ಯನ ಮಠ ಬಳಿಯ ಗೋಪಾಲಕೃಷ್ಣ ದೇವಾಲಯದವರೆಗೆ ಮೆರವಣಿಗೆ ನೆರವೇರಲಿದೆ.  ವಿವಿಧ ಸಾಂಸ್ಕøತಿಕ ಕಲಾ ತಂಡಗಳು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.         ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಸಾಗಿ ಬರುವ ಮಾರ್ಗದಲ್ಲಿ ರಸ್ತೆಯನ್ನು ಸ್ವಚ್ಛಗೊಳಿಸಬೇಕು.  ಸಾಹಿತ್ಯ ಭವನ, ಮೆರವಣಿಗೆ ಮಾರ್ಗ ಹಾಗೂ ಗೋಪಾಲಕೃಷ್ಣ ದೇವಾಲಯ ಬಳಿ ನಗರಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆಗೊಳಿಸಬೇಕು.   ವೇದಿಕೆ ಅಲಂಕಾರ, ಮೆರವಣಿಗೆ ವ್ಯವಸ್ಥೆ ಹಾಗೂ ಸಮರ್ಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಸಾಗರ ದಾಂಡೇಕರ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಗಣ್ಯರಾದ ವೆಂಕಣ್ಣ ಬಂಡ್ಲಿ, ಮಾರುತಿ ಕಟಗಾಲಿ, ಹೆಚ್. ಜಗನ್ನಾಥ, ಶಿವಾನಂದ ಹೊದ್ಲೂರ, ನಾಗರಾಜ ಬಳ್ಳಾರಿ, ವೆಂಕಟೇಶ್ ಕಟ್ಟಿಮನಿ, ಹುಲಗಪ್ಪ ವಾಲಿಕರ್ ಮುಂತಾದವರು ಪಾಲ್ಗೊಂಡಿದ್ದರು.

Please follow and like us:
error