ಇಂದು ಉರ್ದುಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

koppal_beo_officeಕೊಪ್ಪಳ,ಸೆ,೧೮: ಉರ್ದು ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಕೂಡಲೇ ರಾಜ್ಯದ ಎಲ್ಲ ಉರ್ದುಶಾಲೆಗಳನ್ನು ಉನ್ನತಿಕರಣಗೊಳಿಸಬೇಕು ಮತ್ತು ಎಲ್ಲ ಉರ್ದು ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕೂಡಲೇ ಒದಗಿಸಬೇಕೆಂದು ಆಗ್ರಹಿಸಿ ೧೯ರ ಸೋಮವಾರ ಬೆಳಿಗ್ಗೆ ೧೦ ರಿಂದ ಬಿಇಓ ಕಚೇರಿ ಎದುರು ಉಪವಾಸ ಸತ್ಯಾಗಹ್ರವನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ಸಲಿಂ ಅಳವಂಡಿ ಹೇಳಿದರು.
ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವುಬಾರಿ ಮನವಿಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ ಅದಕ್ಕಾಗಿ ಸಹಸ್ರಾರು ವಿದ್ಯಾರ್ಥಿಗಳು ಪಾಲಕರು ಮತ್ತು ಕಾರ್ಯಕರ್ತರೊಂದಿಗೆ ಬೆಳಿಗ್ಗೆ ೧೦ ಗಂಟೆಗೆ ಸರಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಅಶೋಕಸರ್ಕಲ್‌ವರೆಗೂ ಘೋಷಣೆಗಳೊಂದಿಗೆ ಮಾನವ ಸರಪಳಿ ನಿರ್ಮಿಸಿ ನಂತರ ಬಿಇಓ ಕಚೇರಿಯ ಎದುರು ನಮ್ಮ ಬೇಡಿಕೆ ಈಡೇರುವವರೆಗೂ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ಸಲಿಂ ಅಳವಂಡಿ ತಿಳಿಸಿದರು.

Please follow and like us:
error