ಇಂದು ಮಾನವ ಹಕ್ಕುಗಳ ಜಾಗೃತ ಸಮಿತಿಯಿಂದ ಉತ್ತರ ಕರ್ನಾಟಕ ಸಮಾವೇಶ

humanಕೊಪ್ಪಳ ೨೧: ಮಾನವ ಹಕ್ಕುಗಳ ಜಾಗೃತ ಸಮಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಇವರ ವತಿಯಿಂದ ನ.೨೨ ರಂದು ಮಧ್ಯಾಹ್ನ ೪.೩೦ ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಉತ್ತರ ಕರ್ನಾಟಕ ಸಮಾವೇಶ ಹಾಗೂ ಕಾನೂನು ಅರಿವು ವಿಚಾರ ಸಂಕೀರ್ಣ ವೈಚಾರಿಕತೆ ಮತ್ತು ಇತ್ತೀಚಿನ ವಿದ್ಯಮಾನಗಳ ಒಂದು ನೋಟ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷರಾದ ಶ್ರೀಮತಿ ಮೀರಾ ಸಿ.ಸಕ್ಸೇನಾರವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ವೇಣುಗೋಪಾಲ ವೈಧ್ಯ ಅವರು ವಹಿಸುವರು. ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ|| ಸಮೇತನಹಳ್ಳಿ ಲಕ್ಷ್ಮಣಸಿಂಗ್ ಅವರು ಸಾಧಕರಿಗೆ ಗೌರವ ಸಮರ್ಪಣೆಯನ್ನು ಮಾಡುವರು. ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷರಾದ ಸೇತುರಾಮ ದಿಗ್ಗಾವಿ ಅವರು ಶ್ಯಾಲು ಮತ್ತು ಧ್ವಜಾಅನಾವರಣಗೊಳಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಧೀಶರಾದ ವಿಜಯಲಕ್ಷ್ಮೀ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತ್ಯಾಗರಾಜನ್, ಜಿ.ಪಂ.ಸಿಇಓ ಆರ್.ರಾಮಚಂದ್ರನ್, ಜಿಲ್ಲಾ ಗ್ರಾಹಕರ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಏಕತಾ ಎಚ್.ಡಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಗಂಟಿ, ನೋಟರಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಆಸೀಫ್ ಅಲಿ, ಮಾನವ ಹಕ್ಕುಗಳ ಆಯೋಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಪ್ರಭುಶಂಕರ, ರಾಜ್ಯ ಕಾರ್ಮಿಕ ಸಮಿತಿಯ ಅಧ್ಯಕ್ಷರಾದ ಕೆ.ಮಲ್ಲಿಕಾರ್ಜುನರೆಡ್ಡಿ, ರಾಜ್ಯ ಕಾರ್ಮಿಕ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉತ್ತರ ಕರ್ನಾಟಕ ಉಸ್ತುವಾರಿ ಚಕ್ರಪಾಣಿ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಮಹಿಳಾ ಜಿಲ್ಲಾಧ್ಯಕ್ಷೆ ಸರೋಜಾಬಾಯಿ ಸಿಂಗ್ರಿ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಗುರುಪಾದಯ್ಯ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಶ್ರೀಪಾದಪ್ಪ ಅಧಿಕಾರಿ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾ ಕಾನೂನು ಸಲಹೆಗಾರ ಮಂಜುನಾಥ ಉಮಚಗಿ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಉಪಾಧ್ಯಕ್ಷ ಮುನಿಯಪ್ಪ ಕೋಲಾರ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಸಂಘ ಕಾರ್ಯದರ್ಶಿ ಕೆ.ಆರ್.ಕೃಷ್ಣಪ್ರಸಾದ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಖಜಾಂಚಿ ರಜನಿ ಸಿ.ಡಿ., ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಸಂ.ಕಾರ್ಯದರ್ಶಿ ಪಿ.ಸಿ.ಲಕ್ಷ್ಮೀನಾರಾಯಣ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಯುವ ಸಮಿತಿಯ ಅಧ್ಯಕ್ಷ ಮಂಜುನಾಥ ಟಿ.ವಾಯ್, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜನಘಟ್ಟ ಕೃಷ್ಣಮೂರ್ತಿ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಕೆ.ಆರ್.ಪುರಂನ ತಾಲೂಕ ಅಧ್ಯಕ್ಷ ಜಯರಾಮ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುತ್ತಿದ್ದು, ಕುಷ್ಟಗಿಯ ಬಿಜೆಪಿ ತಾಲೂಕ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ತಮ್ಮಣ್ಣಚಾರ್ಯ ದಿಗ್ಗಾವಿ, ಕುಣಿಕೇರಿ ಸರ್ಕಾರಿ ಶಾಲೆಗೆ ಎರಡು ಎಕರೆ ಜಮೀನು ಧಾನವಾಗಿ ನೀಡಿ ಮತ್ತು ಅದೆ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿರುವ ಹುಚ್ಚಮ್ಮ ಬಸಪ್ಪ ಚೌದ್ರಿ, ಹೊಸಪೇಟೆಯ ಗಣಿ ಮಾಲೀಕರು ಹಾಗೂ ಸಮಾಜ ಸೇವಕರಾದ ಪಂತರ ಜಯಂತ ಅವರಿಗೆ ಇದೇ ವೇಳೆ ಸನ್ಮಾನಿಸಲಾಗುವುದು ಹಾಗೂ ಕಾರ್ಯಕ್ರಮದ ಪೂರ್ವದಲ್ಲಿ ಜನಪದ ಗೀತೆ, ಡೊಳ್ಳು ಕುಣಿತ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷರಾದ ಸೇತುರಾಮ ದಿಗ್ಗಾವಿ ಅವರು ಪ್ರಕಟಣೆಯ ಮೂಲಕ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.

Please follow and like us:
error