ಉಳೇನೂರು ದ್ಯಾಮವ್ವದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಉಳೇನೂರು ಗ್ರಾಮದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದ್ಯಾಮವ್ವದೇವಿಯ ಜಾತ್ರಾ ಮಹೋತ್ಸವವು ಡಿ.೨೮ ಮತ್ತು ೨೯ ರಂದು ಎರಡು ದಿನಗಳ ಕಾಲ ನಡೆಯಲಿದ್ದು, ದೇವಸ್ಥಾನದ ಆವರಣದೊಳಗೆ ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರಾಣಿ ನಿಷೇಧ ಕಾಯ್ದೆ ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳ ಪ್ರಕಾರ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಡಿ.೨೮ ಮತ್ತು ೨೯ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಉಳೇನೂರು ಗ್ರಾಮದ ದೇವಸ್ಥಾನದ ಆವರಣದಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಜಮೀನುಗಳಲ್ಲಿ ಭಕ್ತಾದಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply