You are here
Home > Koppal News-1 > ಎಸ್‌ಎಸ್‌ಎಲ್‌ಸಿ ಸಮಾಜವಿಜ್ಞಾನ ಪರೀಕ್ಷೆ : ಓರ್ವ ವಿದ್ಯಾರ್ಥಿ ಡಿಬಾರ್

ಎಸ್‌ಎಸ್‌ಎಲ್‌ಸಿ ಸಮಾಜವಿಜ್ಞಾನ ಪರೀಕ್ಷೆ : ಓರ್ವ ವಿದ್ಯಾರ್ಥಿ ಡಿಬಾರ್

sslc-exam-debar
ಕೊಪ್ಪಳ ಏ. ೧೧: ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ೧೭೬೮೮ ವಿದ್ಯಾರ್ಥಿಗಳು ಹಾಜರಾಗಿದ್ದು, ೮೩೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ೧೮೪೯೮ ವಿದ್ಯಾರ್ಥಿಗಳ ಪೈಕಿ ೧೭೬೬೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೮೩೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ೨೫೦, ಕೊಪ್ಪಳ- ೩೫೮, ಕುಷ್ಟಗಿ- ೯೧ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ೧೩೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕು ಹನುಮಸಾಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ .

Leave a Reply

Top