ಏ. ೨೩ ರಂದು ‘ಶಾಲೆ ಕಡೆ ನನ್ನ ನಡೆ’ ಆಂದೋಲನಕ್ಕೆ ಚಾಲನೆ -ಕೆ. ನಾಗರತ್ನ.

ಕೊಪ್ಪಳ ಏ.೨೧  ಶಾಲೆಗೆ ಹೋಗದ ಮತ್ತು ಶಾಲೆಯಿಂದ ಹೊರಗುಳಿದ ಜಿಲ್ಲೆಯ ಎಲ್ಲಾ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ‘ಶಾಲೆ ಕಡೆ ನನ್ನ ನಡೆ’ ಶಿಕ್ಷಣ ನನ್DSC_0147ನ ಮೂಲಭೂತ ಹಕ್ಕು ಎಂಬ ವಿನೂತನ ಜನಾಂದೋಲನ ಕಾರ್ಯಕ್ರಮಕ್ಕೆ ಏ.೨೩ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಚಾಲನೆ ದೊರೆಯಲಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಾಗರತ್ನ ಅವರು ಹೇಳಿದರು.
ಮಕ್ಕಳ ಶಿಕ್ಷಣ ಹಕ್ಕು ಜಾರಿಗಾಗಿ ‘ಶಾಲೆ ಕಡೆ ನನ್ನ ನಡೆ’ ಶಿಕ್ಷಣ ನನ್ನ ಮೂಲಭೂತ ಹಕ್ಕು ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕೊಪ್ಪಳದ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲೆಗೆ ಹೋಗದ ಮತ್ತು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ನಿಟ್ಟಿನಲ್ಲಿ ‘ಶಾಲೆ ಕಡೆ ನನ್ನ ನಡೆ’ ಶಿಕ್ಷಣ ನನ್ನ ಮೂಲಭೂತ ಹಕ್ಕು ಎಂಬ ವಿನೂತನ ಜನಾಂದೋಲನ ಕಾರ್ಯಕ್ರಮವನ್ನು ಏ. ೨೩ ರಂದು ಆಯೋಜಿಸಲಾಗುತ್ತಿದೆ. ಎಲ್ಲಾ ಇಲಾಖೆ ಅಧಿಕಾರಿಗಳು, ನೋಡಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಸಮುದಾಯ ಸಂಘಟನೆ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಅನುಷ್ಠನ ಗೊಳಿಸಬೇಕು. ತಾಯಂದಿರು ಹೆಚ್ಚು ವಿದ್ಯಾವಂತರಾದಂತೆಲ್ಲಾ ಮಕ್ಕಳು ಶಾಲೆಯಿಂದ ಹೊರಗುಳಿಯುವ ಪ್ರಮಾಣ ಕಡಿಮೆಯಾಗುತ್ತದೆ. ಮಹಿಳಾ ಸಾಕ್ಷರತೆ ಪ್ರಮಾಣ ಹೆಚ್ಚಾಗಬೇಕು. ತಾಯಿಯೇ ಮೊದಲ ಗುರು ಎನ್ನುವಂತೆ ತಾಯಿ ಮೊದಲು ವಿದ್ಯಾವಂತಳಾದರೆ ಮಕ್ಕಳನ್ನು ಶಾಲೆಯಿಂದ ಹೊರಗುಳಿಯಲು ಬಿಡುವುದಿಲ್ಲ. ಆಗ ಶಾಲೆಯಿಂದ ಹೊರಗುಳಿಯುವ ಮಕ್ಕಳ ಪ್ರಮಾಣ ಸಹಜವಾಗಿ ಕಡಿಮೆಯಾಗಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯವನ್ನ ಮನಃಪೂರ್ವಕವಾಗಿ ನಿರ್ವಹಿಸಿದಾಗ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಾಗರತ್ನ ಅವರು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ರಾಮತ್ನಾಳ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯ ಸರಕಾರ ಏ.೨೩ ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕ ಕಾಲದಲ್ಲಿ ಮಕ್ಕಳ ಶಿಕ್ಷಣ ಹಕ್ಕು ಜಾರಿಗಾಗಿ ‘ಶಾಲೆ ಕಡೆ ನನ್ನ ನಡೆ’ ಶಿಕ್ಷಣ ನನ್ನ ಮೂಲಭೂತ ಹಕ್ಕು ಎಂಬ ಘೋಷವಾಕ್ಯ ದೊಂದಿಗೆ ಬೃಹತ್ ಜಾಗೃತಿ ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಏ.೧ ರಂದು ಈ ಆಂದೋಲನದ ಲೋಗೋ ಹಾಗೂ ಘೊಷವಾಕ್ಯ ಬಿಡುಗಡೆ ಮಾಡುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ರಾಜ್ಯ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನ ಮುಖ್ಯವಾಹಿನಿಗೆ ಕರೆತರುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದ್ದು ಈ ಜನಾಂದೋಲನಕ್ಕೆ ಎಲ್ಲ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಸಹರಿಸಬೇಕಿದೆ ಎಂದರು.  ಜಿಲ್ಲೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯಲು ಪ್ರಮುಖ ಕಾರಣಗಳೇನು ಹಾಗೂ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳನ್ನ ಪುನಃ ಶಾಲೆಗೆಳಿಗೆ ಕರೆತರಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ದಶರಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಗದೀಶ, sಸರ್ವೊದಯ ಸಂಸ್ಥೆಯ ಶರಣಪ್ಪ, ವಕೀಲ ಜಯರಾಜ, ಗಣ್ಯರಾದ ಡಾ.ಜ್ಞಾನಸುಂದರ್, ಮೈಲಪ್ಪ ಬಿಸರಳ್ಳಿ, ಲಕ್ಷ್ಮಣ, ಮಕ್ಕಳ ರಕ್ಷಣಾ ಸಂಸ್ಥೆ ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಉಪಸ್ಥಿತರಿದ್ದರು.

Please follow and like us:
error