You are here
Home > Koppal News-1 > ಏ. ೨೭ ರಂದು ಸಿ.ಎಂ ಕೊಪ್ಪಳ ಜಿಲ್ಲೆ ಬರ ಪರಿಶೀಲನೆ.

ಏ. ೨೭ ರಂದು ಸಿ.ಎಂ ಕೊಪ್ಪಳ ಜಿಲ್ಲೆ ಬರ ಪರಿಶೀಲನೆ.

ಕೊಪ್ಪಳ ಏ. ೨೨  ಕೊಪ್ಪಳ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಪರಿಶೀಲನೆಗಾಗಿ ಏ. ೨೭ ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಗದಗ ಜಿಲ್ಲೆಯಲ್ಲಿನ ಬರ ಪರಿಶೀಲನೆ ಕಾರ್ಯಕ್ರಮದ ನಂತರ ಮಧ್ಯಾಹ್ನ ೧ ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಮಧ್ಯಾಹ್ನ ೨-೩೦ ಗಂಟೆಗೆ ಕೊಪ್ಪಳ ಜಿಲ್ಲಾ ಪರಿಶೀಲನಾ ಸಭೆ ನಡೆಸುವರು. ನಂತರ ಕೊಪ್ಪಳ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ತರುವಾಯ ಸಂpvec15siddu imagesಜೆ ೬-೩೦ ಗಂಟೆಗೆ ಮುಖ್ಯಮಂತ್ರಿಗಳು ಬಳ್ಳಾರಿ ಜಿಲ್ಲೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್‌ನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Leave a Reply

Top