You are here
Home > Koppal News-1 > ಏ. ೩೦ ರಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ.

ಏ. ೩೦ ರಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ.

ಕೊಪ್ಪಳ ಏ. ೨೧ ಕೊಪ್ಪಳ ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕಾಗಿ ಏ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವಾಲಯದ ಅಧಿಸೂಚನೆಯಂತೆ ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್image.phpಥಾನವನ್ನು ಹಿಂದುಳಿದ ವರ್ಗ-ಅ(ಮಹಿಳೆ) ಗೆ ಮೀಸಲಿರಿಸಲಾಗಿದೆ. ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಚುನಾವಣೆಯನ್ನು ಏ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಸಲಾಗುವುದು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ನಾಮಪತ್ರವನ್ನು, ಪ್ರಾದೇಶಿಕ ಆಯುಕ್ತರಿಂದ ನಾಮನಿರ್ದೇಶಿತರಾದ ಜಿ.ಪಂ. ಉಪಕಾರ್ಯದರ್ಶಿಗಳಿಗೆ ಏ. ೩೦ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯೊಳಗೆ ಸಲ್ಲಿಸಬಹುದು ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

 

Leave a Reply

Top