ಕರ ಸಂಗ್ರಹಣೆಗೆ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು- ಸಚಿವ ಖಮರುಲ್ ಇಸ್ಲಾಂ

ಕೊಪ್ಪಳ ಏ. ೨೯ ನಗರ ಸ್ಥಳೀಯ ಸಂಸ್ಥೆಗಳು, ಆಸ್ತಿ ಕರ, ನೀರಿನ ಕರ ಸೇರಿದಂತೆ ಇತರೆ ಕರಗಳ ಸಂಗ್ರಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮೂಲಕ ನಗರಗಳ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಬೇಕು ಎಂದು ರಾಜ್ಯ ಪೌರಾಡಳಿತ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಖಮರುಲ್ ಇಸ್ಲಾಂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರುDSC_0422. ನಗರ ಸ್ಥಳೀಯ ಸಂಸ್ಥೆಗಳು ದೃಢವಾಗಬೇಕಾದರೆ ಮೊದಲು ಆದಾಯ ಮೂಲಗಳು ಗಟ್ಟಿಯಾಗಿರಬೇಕು, ಜಿಲ್ಲೆಯಲ್ಲಿ ಕರವಸೂಲಿ ಪ್ರಮಾಣ ತುಂಬಾ ಕಡಿಮೆಯಿದ್ದು ಕೂಡಲೇ ಕರ ವಸೂಲಿಗೆ ಕಠಿಣ ಜರುಗಿಸಿ ಜಾಹೀರಾತು, ನೀರಿನ ಹಾಗೂ ವಾಣಿಜ್ಯ ತೆರಿಗೆ ವಸೂಲಾತಿ ಮಾಡಲು ಸೂಕ್ತ ಕ್ರಮ ಜರುಗಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗುವ ಪರಿಸ್ಥಿತಿ ತಲೆದೋರುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಒದಗಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ಸೌಕರ್ಯ ಇಲ್ಲದ ವಾರ್ಡ್‌ಗಳಲ್ಲಿ ಬೋರ್‌ವೆಲ್ ಕೊರೆಯಿಸಿ ನೀರು ಒದಗಿಸಿ ಒಂದು ವೇಳೆ ನೀರು ಬೀಳದಿದ್ದರೆ ನೀರು ಇರುವಂತಹ ವಾರ್ಡ್‌ಗಳಿಂದ ನೀರಿನ ಅಭಾವವಿರುವ ವಾರ್ಡ್‌ಗಳಿಗೆ ನೀರು ಪೂರೈಸುವ ವ್ಯವಸ್ಥೆ ಕೈಗೊಳ್ಳಿ ದುರಸ್ಥಿಯಲ್ಲಿರುವ ಬೋರ್‌ವೆಲ್‌ಗಳನ್ನು ಸರಿ ಮಾಡಿ ಸಾರ್ವಜನಿಕ ಬಳಕೆಗೆ ಅನುವು ಮಾಡಿಕೊಡಿ ಹಾಗೂ ಈಗಾಗಲೇ ಕೊರೆಯಿಸಿದ ಬೋರ್‌ವೆಲ್‌ಗಳಿಗೆ ಮೋಟರ್ ಅಳವಡಿಸಿ ಸಾರ್ವಜನಿಕರಿಗೆ ತ್ವರಿತವಾಗಿ ನೀರು ಒದಗಿಸಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಹಾಗೂ ಬರದಿಂದಾಗಿ ಅಂತರ್‌ಜಲ ಕುಸಿದಿದ್ದು ಖಾಸಗಿ ಬೋರ್‌ವೆಲ್ ಮೂಲಕ ನೀರು ಪಡೆದು ಒದಗಿಸುವ ವ್ಯವಸ್ಥೆ ಕೈಗೊಳ್ಳಬೇಕು ತೀವ್ರ ನೀರಿನ ಸಮಸ್ಯೆ ಎದುರಿಸುವ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಿರೆಂದು ಹೇಳಿದರು.  ಎಸ್‌ಎಫ್‌ಸಿ ಅನುದಾನದಲ್ಲಿ ಪ.ಜಾತಿ ಹಾಗೂ ಪ.ಪಂಗಡದ ವಿಕಲಚೇನರಿಗೆ ತ್ರಿಚಕ್ರ ಮೋಟಾರು ವಾಹನ ಒದಗಿಸಲು ಸುಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವ ಖಮರುಲ್ ಇಸ್ಲಾಂ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರಮೇಶ್, ನಗರಸಭೆಗಳ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Please follow and like us:
error