ಕಲಕೇರಿ ಗೋಶಾಲೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ.

ಕೊಪ್ಪಳ ಏ. ೨೨  ಕುಷ್ಟ2ಗಿ ತಾಲೂಕು ಕಲಕೇರಿ ಸಸ್ಯಪಾಲನಾ ಕ್ಷೇತ್ರದಲ್ಲಿ ಪ್ರಾರಂಭಿಸಲಾಗಿರುವ ಗೋಶಾಲೆಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಕೇರಿಯಲ್ಲಿ ಈಗಾಗಲೆ ಮೇವು ಬ್ಯಾಂಕ್ ಸ್ಥಾಪಿಸಲಾಗಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಮೇವನ್ನು ದಾಸ್ತಾನು ಮಾಡಲಾಗಿದೆ. ಕಲಕೇರಿಯಲ್ಲಿ ಪ್ರಾರಂಭಿಸಲಾಗಿರುವ ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು, ನೀರು, ನೆರಳಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಂಡಿರುವ ಕುರಿತು ಪರಿಶೀಲನೆ ನಡೆಸಿದರು. ಕುಷ್ಟಗಿ ತಹಸಿಲ್ದಾರ್ ವೇದವ್ಯಾಸ ಮುತಾಲಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error