ಕಿನ್ನಾಳ ವಿದ್ಯಾರ್ಥಿ ಮನೆಗೆ ಜೆಸ್ಕಾಂ ನಿರ್ದೇಶಕ ಶ್ರೀನಿವಾಸ ರೆಡ್ಡಿ ಭೇಟಿ

koppal-shortcircuit-deathವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕಿನ್ನಾಳದ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಹನುಮೇಶ್ ಕರಿಯಪ್ಪ ಬನ್ನಿಕಟ್ಟಿ ಅವರ ಮನೆಗೆ ಜೆಸ್ಕಾಂ ನಿರ್ದೇಶಕ ಶ್ರೀನಿವಾಸ ರೆಡ್ಡಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕಿನ್ನಾಳದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಜೂ. ೨೨ ರಂದು ವಿದ್ಯುತ್ ಶಾಕ್‌ನಿಂದ ವಿದ್ಯಾರ್ಥಿ ಹನುಮೇಶ್ ಕರಿಯಪ್ಪ ಬನ್ನಿಕಟ್ಟಿ ಮೃತಪಟ್ಟ ದುರ್ಘಟನೆ ಜರುಗಿತ್ತು. ಈ ಹಿನ್ನೆಲೆಯಲ್ಲಿ ಜೆಸ್ಕಾಂ ನ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ಶನಿವಾರದಂದು ಕಿನ್ನಾಳ ಗ್ರಾಮಕ್ಕೆ ತೆರಳಿ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನದ ಮಾತುಗಳನ್ನಾಡಿದರು. ಶಾಲೆಯ ಬಳಿಯಲ್ಲಿನ ಟ್ರಾನ್‌ಫಾರ‍್ಮರ್ ಅನ್ನು ಈಗಾಗಲೆ ಸ್ಥಳಾಂತರಿಸಲಾಗಿದೆ. ನಂತರ ಅದೇ ಗ್ರಾಮದ ಇನ್ನೊಂದು ಶಾಲೆಗೆ ಭೇಟಿ ನೀಡಿ ಪರಿಶಿಲಿಸಿದ ಸಂದರ್ಭದಲ್ಲಿ ಶಾಲೆಯ ನಡುವೆಯೇ ಇದ್ದ ವಿದ್ಯುತ್ ಕಂಬವನ್ನು ಸ್ಥಳದಲ್ಲಿಯೇ ಹಾಜರಿದ್ದು, ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದ ಕಾರ್ಯ ಕೈಗೊಂಡರು. ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರು ಹಾಗೂ ಎಸ್‌ಡಿಎಂಸಿ ಯವರು, ಆಯಾ ಶಾಲೆಗಳಲ್ಲಿ ವಿದ್ಯುತ್ ಸಂಪರ್ಕಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು. ಆಂತರಿಕ ವೈರಿಂಗ್ ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ಕಂಪ್ಯೂಟರ್‌ಗಳನ್ನು ಹೊಂದಿರುವ ಶಾಲೆಗಳು ವಿದ್ಯುತ್ ಉಪಕರಣಗಳಿಗೆ ಸೂಕ್ತ ವೈರಿಂಗ್ ಹಾಗೂ ಅರ್ಥಿಂಗ್ ಮಾಡಿಸಲು ಅಗತ್ಯ ಕ್ರಮ ಕೈಗೊಂಡು, ಅಮಾಯಕ ವಿದ್ಯಾರ್ಥಿಗಳ ಪ್ರಾಣ ರಕ್ಷಣೆಗೆ ಮುಂದಾಗಬೇಕು ಎಂದು ಜೆಸ್ಕಾಂ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ಮನವಿ ಮಾಡಕೊಂಡರು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಈಗಾಗಲೆ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಲಾಗಿದ್ದು, ಪರಿಹಾರ ಒದಗಿಸುವಂತೆ ಕೋರಲಾಗಿದೆ ಎಂದರು.
ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಮಹೇಶ್, ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಗಂಗಾಧರ್, ವಿಎಸ್‌ಎಸ್‌ಎನ್ ಅಧ್ಯಕ್ಷ ವಿರೇಶ್, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಚಿಲವಾಡಗಿ, ಶರೀಫ್, ದೇವಣ್ಣ ಮುಂತಾದವರಿದ್ದರು.

Please follow and like us:
error