You are here
Home > Koppal News-1 > ಕೊಪ್ಪಳದಲ್ಲಿ ಡೆಂಗ್ಯೂ ಜಾಗೃತಿ ಜಾಥಾಕ್ಕೆ ಚಾಲನೆ.

ಕೊಪ್ಪಳದಲ್ಲಿ ಡೆಂಗ್ಯೂ ಜಾಗೃತಿ ಜಾಥಾಕ್ಕೆ ಚಾಲನೆ.

ಕೊಪ್ಪಳ ಮೇ ೩೦ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜನ ಸಮುದಾಯದಲ್ಲಿ ಡೆಂಗ್ಯು ರೋಗ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೋಮವಾDSCN0909ರದಂದು ಕೊಪ್ಪಳದಲ್ಲಿ ಆಯೋಜಿಸಿದ್ದ ಡೆಂಗ್ಯೂ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಹಸಿರು ನಿಶಾನೆ ತೋರುವ ಮೂಲಕ ಹಳೆಯ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು. ಜಾಥದಲ್ಲಿ ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ನಗರಸಭೆ ಸಿಬ್ಬಂದಿಯವರು ಸಕ್ರಿಯವಾಗಿ ಭಾಗವಹಿಸಿದರು. ಕೊಪ್ಪಳ ನಗರದಲ್ಲಿ ಸಂಚರಿಸಿದ ಜಾಥಾದಲ್ಲಿ ಜನ-ಜಾಗೃತಿ ಸಂದೇಶಗಳನ್ನು ಬಿತ್ತರಿಸಲಾಯಿತು. ತೆರೆದವಾಹನದಲ್ಲಿ ಡೆಂಗ್ಯೂ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ ಹಾಗೂ ಡೆಂಗ್ಯೂ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ನಗರದಲ್ಲಿ ಜನ ಜಾಗೃತಿಯನ್ನು ಮೂಡಿಸಲಾಯಿತು. ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ ಬಾಸೂರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವಿರುಪಾಕ್ಷ ರೆಡ್ಡಿ ಮಾದಿನೂರ, ಗಣ್ಯರಾದ ಶಿವಾನಂದ ಹೊದ್ಲೂರ ಮುಂತಾದವರು ಜಾಥಾದಲ್ಲಿ ಭಾಗವಹಿಸಿದ್ದರು.

Leave a Reply

Top