ಕೊಪ್ಪಳ ಜಿಲ್ಲಾ ಆಸ್ಪತ್ರೆ : ಯು.ಟಿ. ಖಾದರ್ ಭೇಟಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಸೋಮವಾರದಂದು ಕೊಪ್ಪಳ ನಗರದಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ವಿಚಾರಣೆ ನಡೆಸಿದರು. ರೋಗಿಗಳಿಗೆ ಹೊರಗಡೆ ಔಷಧಿ ತರುವಂತೆ ಚೀಟಿ ಬರೆದುಕೊಡದಂತೆ ಇಲ್ಲಿನ ವೈದ್ಯರುಗಳಿಗೆ ತಾಕೀತು ಮಾಡಿದರು. ಅಲ್ಲದೆ ಆಸ್ಪತ್ರೆಯ ಸ್ವಚ್ಛತೆಯನ್ನು ಕಾಯ್ದುಕೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಲೋಕೇಶ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ut-khader-koppal-hospital ut-khader-koppal

Please follow and like us:
error