ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಓ ಅವರಿಂದ ನವದೆಹಲಿಯಲ್ಲಿ ವಿಶೇಷ ಉಪನ್ಯಾಸ

ceo_koppal ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವಯಕ್ತಿಕ ಶೌಚಾಲಯ ನಿರ್ಮಾಣ ಹಾಗು ಜನ ಜಾಗೃತಿಯಲ್ಲಿ ವಿಶೇಷ ಸಾಧನೆ ಮಾಡಿರುವ, ಕೊಪ್ಪಳ ಜಿಲ್ಲೆಯ ಸಾಧನೆಯ ಮಾಹಿತಿಯನ್ನು ಹಂಚಿಕೊಳ್ಳುವ ಸಲುವಾಗಿ ಕೊಪ್ಪಳದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಬುಧವಾರದಂದು ನವದೆಹಲಿಯ ಭಾರತೀಯ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ೨೦೧೩-೧೪ ರಲ್ಲಿ ೪೨೦೫೯ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ, ೨೦೧೪-೧೫ ರಲ್ಲಿ ೪೮೦೨೯ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದು, ಪ್ರಸ್ತುತ ಒಂದು ಲಕ್ಷಕ್ಕಿಂತ ಹೆಚ್ಚು ಶೌಚಾಲಯಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ನಿರ್ಮಿಸಲಾಗಿದೆ. ಅಲ್ಲದೆ ಇದರ ಜೊತೆಗೆ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ಕಲ್ಲು ಬಂಡೆಯ ಮೇಲೆ ಶೌಚಾಲಯ, ತಿಪ್ಪೆಗುಂಡಿಗಳಿಗೆ ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆಯಿಂದ ಕೊಪ್ಪಳ ಜಿಲ್ಲೆಯು ರಾಜ್ಯದ ಹಾಗೂ ರಾಷ್ಟ್ರದ ಗಮನವನ್ನು ಸೆಳೆದಿದ್ದು, ಈ ಹಿನ್ನಲೆಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲು ಅನುಸರಿಸಿದ ಮಾರ್ಗೊಪಾಯಗಳನ್ನು ಇತರ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ವಿನಿಮಯಕ್ಕಾಗಿ ಕೇಂದ್ರ ನೀರು ಮತ್ತು ನೈರ್ಮಲ್ಯ ಮಂತ್ರಾಲಯ, ನವದೆಹಲಿ ಇವರು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರನ್ನು ಪರಿಗಣಿಸಿ, ಆಹ್ವಾನಿಸಿದ್ದರು. ಇದೀಗ ಗುರುವಾರದಂದು ಕೊಪ್ಪಳದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಬುಧವಾರದಂದು ನವದೆಹಲಿಯ ಭಾರತೀಯ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದರು

Please follow and like us:
error