ಕೊಪ್ಪಳ ಜಿಲ್ಲೆಯ ಎಪಿಎಂಸಿ ಗಳ ಚುನಾವಣೆ ಮುಂದೂಡಿಕೆ

ಕೊಪ್ಪಳ ಜಿಲ್ಲೆ ವ್ಯಾಪ್ತಿಯಲ್ಲಿನ ಗಂಗಾವತಿ, ಕಾರಟಗಿಯ ಭತ್ತ ಮತ್ತು ಅಕ್ಕಿ ಉತ್ಪನ್ನಗಳ ವಿಶೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕೊಪ್ಪಳ, ಕುಷ್ಟಗಿ ಮತ್ತು ಯಲಬುರ್ಗಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಚುನಾವಣೆಯನ್ನು ಮುಂದೂಡಿ ಕೃಷಿ ಮಾರಾಟ ಇಲಾಖೆ ಹೆಚ್ಚುವರಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಅಲ್ಲದೆ ೨೦೧೬-೧೭ ನೇ ಸಾಲಿನ ಬಜೆಟ್ ಭಾಷಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಆಡಳಿತದಲ್ಲಿ ಪ್ರಸ್ತುತ ಇರುವ ಒಂದು ಮಹಿಳಾ ಪ್ರಾತಿನಿಧ್ಯ ಸ್ಥಾನವನ್ನು ಮೂರು ಸ್ಥಾನಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾವನೆ ಚಾಲನೆಯಲ್ಲಿ ಇರುವುದರಿಂದ, ೨೦೧೬ ನೇ ಸಾಲಿನಲ್ಲಿ ಅಧಿಕಾರಾವಧಿ ಮುಕ್ತಾಯಗೊಳ್ಳಲಿರುವ ಹಾಗೂ ಈಗಾಗಲೆ ಅಧಿಕಾರ ಅವಧಿ ಮುಕ್ತಾಯಗೊಂಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ನಡೆಸುವ ಚುನಾವಣೆಯನ್ನು ಮುಂದೂಡುವಂತೆ ಸರ್ಕಾರದಿಂದ ನಿರ್ದೇಶನ ಬಂದ ಕಾರಣ, ಕೊಪ್ಪಳ ಜಿಲ್ಲೆ ವ್ಯಾಪ್ತಿಯಲ್ಲಿನ ಗಂಗಾವತಿ, ಕಾರಟಗಿಯ ಭತ್ತ ಮತ್ತು ಅಕ್ಕಿ ಉತ್ಪನ್ನಗಳ ವಿಶೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕೊಪ್ಪಳ, ಕುಷ್ಟಗಿ ಮತ್ತು ಯಲಬುರ್ಗಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಹೆಚ್ಚುವರಿ ನಿರ್ದೇಶಕರು  ತಿಳಿಸಿದ್ದಾರೆ.

Leave a Reply