You are here
Home > Koppal News-1 > koppal news > ಕೊಪ್ಪಳ : ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

ಕೊಪ್ಪಳ : ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

: ಕೊಪ್ಪಳ ನಗರದಲ್ಲಿ ಪ್ಲಾಸ್ಟಿಕ್‌ನಿಂagust-15ದ ತಯಾರಿಸಿದ ರಾಷ್ಟ್ರಧ್ವಜಗಳನ್ನು ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ ಮಾಡುವಂತಿಲ್ಲ ಎಂದು ನಗರಸಭೆ ಪೌರಾಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ಮಾಡಿದ ರಾಷ್ಟ್ರಧ್ವಜಗಳನ್ನು ಬಳಕೆ ಮಾಡುತ್ತಿರುವುದು ಹಾಗೂ ಕಾರ್ಯಕ್ರಮ ಮುಗಿದ ನಂತರ ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದಾಗಿ ರಾಷ್ಟ್ರಧ್ವಜದ ಗೌರವಕ್ಕೆ ಧಕ್ಕೆ ಉಂಟಾಗುತ್ತಿದೆ ಅಲ್ಲದೆ ಪರಿಸರಕ್ಕೂ ಹಾನಿಯಾಗುತ್ತಿದೆ. ಪೇಪರ್‌ನಿಂದ ರಾಷ್ಟ್ರಧ್ವಜವನ್ನು ಬಳಸಿದಲ್ಲಿ, ರಾಷ್ಟ್ರೀಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಮುಗಿದ ನಂತರ ಧ್ವಜಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ನಿಯಮಾನುಸಾರ ಗೌರವಪೂರ್ವಕವಾಗಿ ಅವುಗಳನ್ನು ನಾಶಪಡಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ.
ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ ನಿರ್ಬಧಿಸಲಾಗಿದ್ದು, ಅದರ ತಯಾರಿಸುವಿಕೆ, ದಾಸ್ತಾನಿಡುವಿಕೆ ಅಥವಾ ಮಾರಾಟ ಮಾಡುವ ಅಥವಾ ವಿತರಣೆ ಮಾಡುವಂತಿಲ್ಲ. ಪ್ಲಾಸ್ಟಿಕ್ ಧ್ವಜಗಳನ್ನು ಬಳಸದೇ ಎಲ್ಲರೂ ಸಹಕರಿಸಿ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಿ, ರಾಷ್ಟ್ರಧ್ವಜಕ್ಕೆ ಗೌರವ ತರುವಂತೆ ನಗರಸಭೆ ಪೌರಾಯುಕ್ತರು  ಮನವಿ ಮಾಡಿದ್ದಾರೆ.

Leave a Reply

Top