ಕೊಪ್ಪಳ-ಭಾಗ್ಯನಗರದಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ಜಪ್ತಿ

ಕೊಪ್ಪಳ ಮತ್ತು ಭಾಗ್ಯನಗರದಲ್ಲಿ ನಗರಸಭೆ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ ಹಾಗೂ ಮಾರಾಟ ಮಾಡದಂತೆ ಈಗಾಗಲೆ ಸರ್ಕಾರ ನಿಷೇಧವನ್ನು ಜಾರಿ ಮಾಡಿದೆ. ಕೊಪ್ಪಳ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ಕೊಪ್ಪಳ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ಕಾರ್ಯಾಚರಣೆ ನಡೆಸಿ, ಸುಮಾರು ೬೨೫ ಕೆ.ಜಿ. ಯಷ್ಟು ನಿಷೇಧಿತ ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದೆ. ಭಾಗ್ಯನಗರದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮಂಜುನಾಥ ಬೆಲ್ಲದ್ ಅವರ ನೇತೃತ್ವದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ಸುಮಾರು ೧೦೪ ಕೆ.ಜಿ.ಯಷ್ಟು ನಿಷೇಧಿತ ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದೆ. ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯತಿ ಅಧಿಕಾರಿಗಳು ಅಂಗಡಿ ಮಾಲೀಕರುಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡುವ ಕಾರ್ಯಕ್ರಮವನ್ನು ಕಳೆದೆರಡು ದಿನಗಳಿಂದ ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯತಿ ಅಧಿಕಾರಿಗಳು plastic-ban-plastic-raide-1 plastic-ban-plastic-raide-koppalತಿಳಿಸಿದ್ದಾರೆ.

Leave a Reply