ಕೊಪ್ಪಳ ಸ್ಥಿರಾಸ್ತಿ ಮಾರುಕಟ್ಟೆ ಮೌಲ್ಯ ಪರಿಷ್ಕರಣೆ: ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿ ಪ್ರಕಟಣೆಗೊಂಡಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಕೊಪ್ಪಳ ಹಿರಿಯ ಉಪ ನೋಂದಣಾಧಿಕಾರಿಗಳ ಕಾರ್ಯಾಲಯದಿಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಪಟ್ಟಿಯನ್ನು ೨೦೧೭-೧೮ ನೇ ಸಾಲಿಗೆ ಪರಿಷ್ಕರಿಸಲು ಕೇಂದ್ರೀಯ ಮೌಲ್ಯ ಮಾಪನ ಸಮಿತಿಯ ಉಪಸಮಿತಿ ವತಿಯಿಂದ, ಫೆ.೨೨ ರಂದು ತಹಶಿಲ್ದಾರರ ಕಛೇರಿಯಲ್ಲಿ ಜರುಗಿದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲ್ತಿಯಲ್ಲಿರುವ ದರಗಳನ್ನು ಆಧಾರವಾಗಿಟ್ಟುಕೊಂಡು ವಾಸ್ತವಿಕ ದರಗಳನ್ನು ಪರಿಶೀಲಿಸಿ, ಅವಶ್ಯವಿರುವ ಪ್ರದೇಶಗಳಿಗೆ ಮಾರ್ಗಸೂಚಿ ದರವನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ.
ಕೊಪ್ಪಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಪಟ್ಟಿಯನ್ನು ಸಾರ್ವಜನಿಕರಿಗೆ ಮಾಹಿತಿಗಾಗಿ ಉಪನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಕಟಿಸಿದ್ದು, ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ೧೫ ದಿನದೊಳಗಾಗಿ ಉಪ ನೋಂದಣಾಧಿಕಾರಿಗಳ ಕಚೇರಿ, ತಹಶಿಲ್ದಾರರ ಕಛೇರಿ ಆವರಣ, ಕೊಪ್ಪಳ ಇವರಿಗೆ ಸಲ್ಲಿಸಲು ಸದಸ್ಯ ಕಾರ್ಯದರ್ಶಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯನಿರ್ಧಾರಣಾ ಉಪಸಮಿತಿ ಹಾಗೂ ಉಪನೋಂದಣಾಧಿಕಾರಿಗಳುತಿಳಿಸಿದ್ದಾರೆ.

Leave a Reply