ಗೂಂಡಾ ಕಾಯ್ದೆಯಡಿ ಇಬ್ಬರ ಬಂಧನ

koppal-dcಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ವರದಿಯ ಆಧಾರದ ಮೇಲೆ, ಗೂಂಡಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. ಗಂಗಾವತಿ ತಾಲೂಕು ಸಿದ್ದಾಪುರ ಗ್ರಾಮದ ಈಶಪ್ಪ ಆರೇರ (೪೫) ಹಾಗೂ ಸಂತೆ ಬಯಲು ಗ್ರಾಮದ ಶಂಕರ್ @ ಶಂಕರಲಿಂಗಪ್ಪ (೩೪) ಎಂಬುವವರೆ ಗೂಂಡಾ ಕಾಯ್ದೆಯಡಿ ಬಂಧನದ ಆದೇಶಕ್ಕೆ ಒಳಗಾಗಿರುವವರು.

goonda_act_arrest ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಅವರು ಈ ಇಬ್ಬರನ್ನು ಕಳ್ಳಭಟ್ಟಿ ವ್ಯವಹಾರಗಳ, ಮಾದಕವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ ಅನೈತಿಕ ವ್ಯವಹಾರ ಅಪರಾಧಿಗಳ ಮತ್ತು ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ಅಪಾಯಕಾರಿ ಚಟುವಟಿಕೆಗಳ ಪ್ರತಿಬಂಧಕ ಅಧಿನಿಯಮ ೧೯೮೫ ಕಲಂ ೩(೨) ರನ್ವಯ ಗೂಂಡಾ ಕಾಯ್ದೆಯಡಿ ಬಂಧಿಸಲು ಆದೇಶ ಕೋರಿ ಜಿಲ್ಲಾಧಿಕಾರಿಗಳಿಗೆ ಕಳೆದ ನ. ೨೦ ರಂದು ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಇದೀಗ ಈ ಇಬ್ಬರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಆದೇಶ ಹೊರಡಿಸಲಾಗಿದೆ .

Please follow and like us:
error