You are here
Home > Koppal News-1 > ಜನಮನ ಸಂವಾದದಲ್ಲಿ ಕೊಪ್ಪಳ ಜಿಲ್ಲೆಯ ಫಲಾನುಭವಿಗಳ ಮನವಿಗೆ ಸಿಎಂ ಸ್ಪಂದನೆ.

ಜನಮನ ಸಂವಾದದಲ್ಲಿ ಕೊಪ್ಪಳ ಜಿಲ್ಲೆಯ ಫಲಾನುಭವಿಗಳ ಮನವಿಗೆ ಸಿಎಂ ಸ್ಪಂದನೆ.

ಕೊಪ್ಪಳ ಮೇ. ೧೭ ಪ್ರಸಕ್ತ ಸರ್ಕಾರ ಕಳೆದ ಮೇ. ೧೩ ಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಬೆಂಗಳೂರಿನಲ್ಲಿ ಇತ್ತೀಚೆಗೆ ಸರ್ಕಾರಿ ಯೋಜನೆಗಳ ಕುರಿತು ಏರ್ಪಡಿಸಿದ ಜನಮನ- ಜನಾಭಿಪ್ರಾಯ ಸಮಾವೇಶದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಫಲಾನುಭವಿಗಳು ವ್ಯಕ್ತಪಡಿಸಿದ ಅನಿಸಿಕೆ-ಅಭಿಪ್ರಾಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿ, ಮನವಿ ಈಡೇರಿಸುವ ಭರವಸೆ ನೀಡಿದರು.
ಪ್ರಸಕ್ತ ಸರ್ಕಾರ ಕಳೆದ ಮೇ. ೧೩ ಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಹೆಬ್ಬಾಳದ ಜಿಕೆವಿಕೆಯಲ್ಲಿನ ಡಾ. ಬಾಬು ರಾಜೇಂದ್ರ ಪ್ರಸಾದ್ ಇಂಟರ್‌ನ್ಯಾಷನಲ್ ಕನ್ವೆನ್‌ಷನ್ ಸೆಂಟರ್ ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರಿ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಸಾಲಮನ್ನ, ಕೃಷಿಭಾಗ್ಯ, ವಿದ್ಯಾಸಿರಿ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಜನಮನ-ಜನಾಭಿಪ್ರಾಯ ಸಮಾವೇಶವನ್ನು ಏರ್ಪಡಿಸಿತು. ಮುಖ್ಯಮಂತ್ರಿಗಳು ಖುದ್ದು ಈ ಕಾರ್ಯಕ್ರಮದಲ್ಲಿ ಪಾvishalakshi speaking with CMಲ್ಗೊಂಡು, ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಿ, ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆದುಕೊಳ್ಳಲು ಉತ್ಸುಕರಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸಂಬಂಧಪಟ್ಟ ಇಲಾಖೆಗಳು ಆಯ್ಕೆಗೊಳಿಸಿದ ೧೦ ಫಲಾನುಭವಿಗಳನ್ನು ಕರೆದುಕೊಂಡು ಹೋಗಲಾಯಿತು. ಮುಖ್ಯಮಂತ್ರಿಗಳೊಂದಿಗೆ ನಡೆದ ಸಂವಾದದಲ್ಲಿ ಕೊಪ್ಪಳದ ವಿಶಾಲಾಕ್ಷಿ ವೀರೇಶ್ ಅವರು ಅನ್ನಭಾಗ್ಯ ಯೋಜನೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಅನ್ನಭಾಗ್ಯ ಯೋಜನೆಯಿಂದ ಬಡವರು ಕನಿಷ್ಟ ಎರಡೊತ್ತು ಹೊಟ್ಟೆತುಂಬ ಊಟ ಮಾಡಲು ಸಾಧ್ಯವಾಗುತ್ತಿದೆ. ಅಂಗವಿಕಲ ಮಗುವನ್ನು ಹೊಂದಿದ್ದರೂ, ತಾನೂ ಅನ್ನಭಾಗ್ಯ ಯೋಜನೆಯ ಕೃಪೆಯಿಂದ ಇಂದು ಮನೆಯ ಸಂಸಾರ ಸಾಗಿಸಲು ಯಾವುದೇ ತೊಂದರೆಯಾಗಿಲ್ಲ. ಅನ್ನಭಾಗ್ಯ ಯೋಜನೆಯಡಿ ಸದ್ಯ ನೀಡುತ್ತಿರುವ ಆಹಾರಧಾನ್ಯದ ಪ್ರಮಾಣವನ್ನು ಹೆಚ್ಚಿಸುವಂತೆ ಮನವಿ ಮಾಡಿದರಲ್ಲದೆ, ಕೊಪ್ಪಳ ಜಿಲ್ಲೆಯು ಹಿಂದುಳಿದ ಜಿಲ್ಲೆಯಾಗಿದ್ದು, ಯಾವುದೇ ಯೋಜನೆಗಳಿರಲಿ, ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಅಕ್ಕಿ, ಗೋಧಿ ಪ್ರಮಾಣ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಳಕಲ್‌ನ ತೋಟಯ್ಯ ಮಠದ ಅವರು ಕೃಷಿ ಭಾಗ್ಯ ಯೋಜನೆಯ ಕುರಿತು ಮಾತನಾಡಿ, ಕೃಷಿ ಹೊಂಡ ಯೋಜನೆಯು ಖುಷ್ಕಿ ಭಾಗದ ರೈತರಿಗೆ ವರದಾನವಾಗಿದೆ. ಒಮ್ಮೆ ಕೃಷಿ ಹೊಂಡ ತುಂಬಿದರೆ ಸಾಕು, ಉತ್ತಮ ಬೆಳೆ ತೆಗೆದು, ಆರ್ಥಿಕ ಸಬಲತೆ ಕಾಣಲು ಸಾಧ್ಯವಾಗುತ್ತಿದೆ. ಈ ಯೋಜನೆಯನ್ನು ಇನ್ನಷ್ಟು ಸುಧಾರಿಸಬೇಕಿದೆ ಎಂದು ಹೇಳಿದರು. ಹಿರೇಸಿಂದೋಗಿಯ ಮಲ್ಲಪ್ಪ ಚನ್ನಾಳ ಅವರು ಸದ್ಯ ಹಾಲು ಉತ್ಪಾದಕರಿಗೆ ಪ್ರತಿ ಲೀ.ಗೆ ೦೪ ರೂ. ಪ್ರೋತ್ಸಾಹಧನ ನೀಡುತ್ತಿರುವುದು, ರೈತರಿಗೆ ಬಹಳಷ್ಟು ಸಹಕಾರಿಯಾಗಿದೆ. ಅಲ್ಲದೆ ಹೈನುಗಾರಿಕೆ ವೃತ್ತಿ ವೃದ್ಧಿಸಿಕೊಳ್ಳಲು ಅತ್ಯಂತ ಅನುಕೂಲವಾಗಿದೆ. ಜಾನುವಾರುಗಳಿಗೆ ನೀಡುವ ಪಶು ಆಹಾರದ ದರದಲ್ಲಿ ಗಣನೀಯ ಏರಿಕೆಯಾಗಿದ್ದು, ರೈತರಿಗೆ ಹೊರೆಯಾಗುತ್ತಿದೆ. ಇದನ್ನು ಸರಿದೂಗಿಸುವಂತಾಗಲು ಪ್ರೋತ್ಸಾಹಧನವನ್ನು ಪ್ರತಿ ಲೀ. ಗೆ ೦೬ ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಬರುವ ದಿನಗಳಲ್ಲಿ ಈ ಕುರಿತು ಗಂಭೀರ ಚಿಂತನೆ ನಡೆಸಲಾಗುವುದು ಎಂದರು. ಗಂಗಾವತಿ ತಾಲೂಕು ಚಿಕ್ಕಜಂತಕಲ್ ಗ್ರಾಮದ ವಿರೇಶ್ ಅವರು ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮಗಳಡಿ ಪಡೆದಂತಹ ಸಾಲವನ್ನು ಮರು ಪಾವತಿ ಮಾಡಲಾಗದೆ, ತೀವ್ರ ಸಂಕಷ್ಟ ಹಾಗೂ ಆತಂಕ ಎದುರಿಸುತ್ತಿದ್ದ ಫಲಾನುಭವಿಗಳಿಗೆ, ಸರ್ಕಾರ ಸಾಲ ಮನ್ನಾ ಮಾಡುವ ಮೂಲಕ, ಅವರ ಬದುಕಿಗೆ ಭರವಸೆಯ ಬೆಳಕು ಮೂಡುವಂತೆ ಮಾಡಿದೆ ಎಂಬುದಾಗಿ ಬಣ್ಣಿಸಿದರು.
ಜನಮನ ಕಾರ್ಯಕ್ರಮದಲ್ಲಿ ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ವಾರ್ತಾ ಮತ್ತು ಮೂಲಭೂತ ಸೌಕರ್ಯ ಖಾತೆ ಸಚಿವ ರೋಷನ್ ಬೇಗ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸೇರಿದಂತೆ ಹಲವು ಸಚಿವರುಗಳು, ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Top